varthabharthi


ಕರಾವಳಿ

ಮಂಗಳೂರಿನಲ್ಲಿ ರಾತ್ರಿ ಕರ್ಫ್ಯೂ: ಬಿಗಿ ಪೊಲೀಸ್ ಬಂದೋಬಸ್ತ್ ; ವಾಹನಗಳಿಗೆ ತಡೆ

ವಾರ್ತಾ ಭಾರತಿ : 10 Apr, 2021

ಮಂಗಳೂರು: ರಾಜ್ಯ ಸರಕಾರದ ಆದೇಶದಂತೆ ಕೋವಿಡ್ -19 ನಿಯಂತ್ರಣಕ್ಕಾಗಿ ಮಂಗಳೂರು ಪೊಲೀಸ್ ‌ಕಮಿಷನರೇಟ್ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿಯಿಂದ ಕೊರೋನ ರಾತ್ರಿ ಕರ್ಪ್ಯೂ ಬಿಗುಗೊಳಿಸಲಾಗಿದೆ. ಎಲ್ಲ ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸರು ತಪಾಸಣೆ ತೀವ್ರಗೊಳಿಸುತ್ತಿದ್ದು ಅನಗತ್ಯ ಸಂಚಾರಕ್ಕೆ ತಡೆಯೊಡ್ಡುತ್ತಿದ್ದಾರೆ.

ಪೊಲೀಸರ ತಪಾಸಣೆ ಭೀತಿಯಿಂದ ಬಹುತೇಕ ಅಂಗಡಿಗಳ ಮಾಲಕರು, ಕೆಲಸಗಾರರು ಅಂಗಡಿಗಳನ್ನು ನಿಗದಿತ ಸಮಯಕ್ಕಿಂತ ಮುಂಚೆಯೇ ಮುಚ್ಚಿ ಮನೆಯತ್ತ ತೆರಳುತ್ತಿರುವ ದೃಶ್ಯ ಕಂಡು ಬಂತು. ಪೊಲೀಸರ ಕಾರ್ಯಾಚರಣೆಗೆ ಮುನ್ನ ನಗರದ ಪದುವಾ ಕಾಲೇಜ್ ಮೈದಾನದಲ್ಲಿ ‌ಪೊಲೀಸ್ ಆಯುಕ್ತ ಶಶಿಕುಮಾರ್ ಪೊಲೀಸ್ ಪರೇಡ್ ನಡೆಸಿ ಮಾರ್ಗದರ್ಶನ ನೀಡಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)