varthabharthi


ಕ್ರೀಡೆ

ಸುರೇಶ್ ರೈನಾ ಅರ್ಧಶತಕ ವ್ಯರ್ಥ, ಶಿಖರ್ ಧವನ್-ಪೃಥ್ವಿ ಶಾ ಭರ್ಜರಿ ಜೊತೆಯಾಟ

ಐಪಿಎಲ್: ಚೆನ್ನೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ವಾರ್ತಾ ಭಾರತಿ : 10 Apr, 2021

ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ 7 ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಗೆಲುವಿಗೆ 189 ರನ್ ಗುರಿ ಪಡೆದ ಡೆಲ್ಲಿ ತಂಡ 18.4 ಓವರ್ ಗಳಲ್ಲಿ 3 ವಿಕೆಟ್ ಗಳ ನಷ್ಟಕ್ಕೆ 190 ರನ್ ಗಳಿಸಿತು.

ಶಿಖರ್ ಧವನ್(85, 54 ಎಸೆತ, 10 ಬೌಂಡರಿ, 2 ಸಿಕ್ಸರ್)ಹಾಗೂ ಪೃಥ್ವಿ ಶಾ(72, 38 ಎಸೆತ, 9 ಬೌಂಡರಿ, 3 ಸಿಕ್ಸರ್)ಮೊದಲ

ವಿಕೆಟ್ ಗೆ 13.3 ಓವರ್ ಗಳಲ್ಲಿ 138 ರನ್ ಜೊತೆಯಾಟ ನಡೆಸಿ ರನ್ ಚೇಸಿಂಗ್ ಗೆ ಭದ್ರ ಬುನಾದಿ ಹಾಕಿಕೊಟ್ಟರು.

ಶಾರ್ದೂಲ್ ಠಾಕೂರ್ 53 ರನ್ ಗೆ 2 ವಿಕೆಟ್ ವಿಕೆಟ್ ಗಳನ್ನು ಪಡೆದರು.

ಇದಕ್ಕೂ ಮೊದಲು ಬ್ಯಾಟಿಂಗ್ ಗೆ ಆಹ್ವಾನಿಸಲ್ಪಟ್ಟ ಚೆನ್ನೈ ತಂಡ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಸುರೇಶ್ ರೈನಾ(54, 36 ಎಸೆತ, 3 ಬೌಂಡರಿ, 4 ಸಿಕ್ಸರ್)ನೀಡಿದ ಅರ್ಧಶತಕದ ಕೊಡುಗೆಯ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)