varthabharthi


ಕರ್ನಾಟಕ

ಹಾಸನದಲ್ಲಿ ರೇವ್ ಪಾರ್ಟಿ: ಯುವತಿಯರ ಸಹಿತ ನೂರಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ

ವಾರ್ತಾ ಭಾರತಿ : 11 Apr, 2021

ಸಾಂದರ್ಭಿಕ ಚಿತ್ರ

ಆಲೂರು, ಎ.11: ಇಲ್ಲಿಯ ಸಮೀಪದ ಐದೂರು ಗ್ರಾಮದ ರೆಸಾರ್ಟ್ ಒಂದರಲ್ಲಿ ರೇವ್ ಪಾರ್ಟಿ ನಡೆಸುತ್ತಿದ್ದ 130 ಯುವಕ,ಯುವತಿಯರನ್ನು ಶನಿವಾರ ತಡರಾತ್ರಿ ವಶಕ್ಕೆ ಪಡೆಯಲಾಗಿದೆ‌.

ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿಯ ಮೇಲೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. ಸುಮಾರು 130 ಜನರನ್ನು ವಶಕ್ಕೆ ಪಡೆದು, ಅಲೂರು ಪಟ್ಟಣದ ಸಮೀಪದ ಕಲ್ಯಾಣ ಮಂಟಪದಲ್ಲಿ ಬಂಧಿಯಾಗಿ ಇಡಲಾಗಿದೆ.

ರೆಸಾರ್ಟ್ ಜಗದೀಶ್ ಎಂಬವರ ಮಾಲಕತ್ವದಲ್ಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಗದೀಶ್ ರವರ ಮಗ ಗಗನ್ ನನ್ನು ಬಂಧಿಸಲಾಗಿದೆ.

ಈ ರೆಸಾರ್ಟ್ ನಲ್ಲಿ ರೇವ್ ಪಾರ್ಟಿಗಳು ನಡೆಯುವುದು ಮಾಮೂಲಾಗಿದೆ. ದೇಶದ ವಿವಿಧ ರಾಜ್ಯಗಳಿಂದ 20ರಿಂದ 30 ವರ್ಷ ವಯಸ್ಸಿನ ಯುವಕ-ಯುವತಿಯರು ಈ ಪಾರ್ಟಿಯಲ್ಲಿ ಆನ್ಲೈನ್ ಮೂಲಕ ಹೆಸರು ನೊಂದಾಯಿಸಿಕೊಂಡು ಭಾಗವಹಿಸುತ್ತಿದ್ದರು ಎಂದು ಹೇಳಲಾಗುತ್ತಿದೆ

ಪ್ರಕರಣವನ್ನು ದಾಖಲಿಸಿಕೊಂಡಿರುವ ಆಲೂರು ಪೊಲೀಸರು ಪಾರ್ಟಿಯ ಬಗ್ಗೆ ಸಾಕಷ್ಟು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಂಜಾ, ಮಾದಕ ದ್ರವ್ಯ ಮಾತ್ರೆಗಳು, ಮದ್ಯದ ಬಾಟಲಿಗಳನ್ನು ವಶ ಪಡಿಸಿಕೊಳ್ಳಲಾಗಿದೆ‌

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)