varthabharthi


ಬೆಂಗಳೂರು

'ರಾತ್ರಿ ಕರ್ಫ್ಯೂ' ಕಾರ್ಯಾಚರಣೆ: ಬೆಂಗಳೂರಿನಲ್ಲಿ 61 ವಾಹನಗಳು ಜಪ್ತಿ

ವಾರ್ತಾ ಭಾರತಿ : 11 Apr, 2021

ಬೆಂಗಳೂರು, ಎ.11: ಕೊರೋನ ಸೋಂಕಿನ ಎರಡನೇ ಅಲೆ ತಡೆಗಟ್ಟುವ ಕಾರಣದಿಂದಾಗಿ ಬೆಂಗಳೂರಿನಲ್ಲಿ ರಾಜ್ಯ ಸರಕಾರ ಜಾರಿಗೊಳಿಸಿರುವ ರಾತ್ರಿ ಕರ್ಫ್ಯೂ ವೇಳೆ ಅನಗತ್ಯವಾಗಿ ಓಡಾಟ ನಡೆಸುತ್ತಿದ್ದ ಆರೋಪದಡಿ 61 ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಶನಿವಾರ ರಾತ್ರಿ ಕರ್ಫ್ಯೂ ಹಿನ್ನೆಲೆಯಲ್ಲಿ ದ್ವಿಮುಖ ರಸ್ತೆಗಳನ್ನು ಏಕಮುಖ ರಸ್ತೆಗಳನ್ನಾಗಿ ಪರಿವರ್ತಿಸಲಾಗಿತ್ತು. ಪೊಲೀಸರು ಬ್ಯಾರಿಕೇಡ್‍ಗಳನ್ನು ಹಾಕಿ ರಾತ್ರಿ 10 ಗಂಟೆ ಮೇಲೆ ಯಾರು ಓಡಾಡದಂತೆ ಗಸ್ತಿನಲ್ಲಿದ್ದರು.

ಈ ವೇಳೆ ಅನಾವಶ್ಯಕವಾಗಿ ಸಂಚಾರ ಮಾಡುತ್ತಿದ್ದ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದರು. ಹಲವು ಚಾಲಕರ ವಿರುದ್ಧ ವಿಕೋಪ ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಕೆಲವೆಡೆ ವಾಹನ ಸವಾರರು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)