varthabharthi


ಕರ್ನಾಟಕ

ಬೆಂಗಳೂರು: ಏಕಲವ್ಯ ಪ್ರಶಸ್ತಿ ವಿಜೇತ ಮಹಿಳಾ ಕ್ರೀಡಾಪಟು ಆತ್ಮಹತ್ಯೆ

ವಾರ್ತಾ ಭಾರತಿ : 11 Apr, 2021

ಬೆಂಗಳೂರು, ಎ.11: ಏಕಲವ್ಯ ಪ್ರಶಸ್ತಿ ವಿಜೇತೆ ಕ್ರೀಡಾಪಟು ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಾರೇನಹಳ್ಳಿ ನಿವಾಸಿ ಶಿಲ್ಪಾ(41) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಕ್ರೀಡಾಕ್ಷೇತ್ರದ ಸಾಧನೆ ಗುರುತಿಸಿ ಆರು ವರ್ಷದ ಹಿಂದೆ ಏಕಲವ್ಯ ಪ್ರಶಸ್ತಿ ನೀಡಲಾಗಿತ್ತು. ಕ್ರೀಡಾ ಶಾಲೆಯೊಂದರಲ್ಲಿ ಕೆಲ ವರ್ಷಗಳಿಂದ ಕೋಚ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಕಳೆದ ವರ್ಷ ಲಾಕ್‍ಡೌನ್ ಹಿನ್ನೆಲೆ ಕೆಲಸ ಕಳೆದುಕೊಂಡಿದ್ದರು. ನೀಲ ಕೃಷ್ಣಪ್ರಸಾದ್ ಎಂಬವರೊಂದಿಗೆ ಮದುವೆಯಾಗಿದ್ದ ಶಿಲ್ಪಾ, ಇತ್ತೀಚಿಗೆ ತಾಯಿ ನಿಧನದಿಂದ ಮತ್ತಷ್ಟು ಖಿನ್ನತೆಗೆ ಒಳಗಾಗಿದ್ದರು. ಇಂದು ಪತಿ ಇಲ್ಲದ ವೇಳೆ ಡೆತ್‍ನೋಟ್ ಬರೆದಿಟ್ಟು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ಪತಿ ಶನಿವಾರ ರಾತ್ರಿ ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)