varthabharthi


ಕರಾವಳಿ

​ಉಪ್ಪಿನಂಗಡಿ : ರಸ್ತೆ ಅಪಘಾತ; ಬಾಲಕಿಗೆ ಗಾಯ

ವಾರ್ತಾ ಭಾರತಿ : 12 Apr, 2021

ಉಪ್ಪಿನಂಗಡಿ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕೊಂದು ಢಿಕ್ಕಿ ಹೊಡೆದು ಪಾದಚಾರಿ ಬಾಲಕಿ ಸಬಿಹ (7) ಎಂಬಾಕೆ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ಕರಾಯ ಎಂಬಲ್ಲಿ ಸೋಮವಾರ ಸಂಭವಿಸಿದೆ.

ಗಾಯಾಳು ಬಾಲಕಿ ಅಬ್ದುಲ್ ಹಮೀದ್ ಎಂಬವರ ಮಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಅಪಘಾತಕ್ಕೆ ಕಾರಣವಾದ ಬೈಕ್ ನ್ನು ಸಂಚಾರಿ ಠಾಣೆ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)