varthabharthi


ರಾಷ್ಟ್ರೀಯ

ಮಹಾರಾಷ್ಟ್ರ: 10, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ವಾರ್ತಾ ಭಾರತಿ : 12 Apr, 2021

ಮುಂಬೈ, ಎ.12: ಮಹಾರಾಷ್ಟ್ರ ರಾಜ್ಯ ಪ್ರೌಢಶಿಕ್ಷಣ ಮತ್ತು ಉನ್ನತ ಮಾಧ್ಯಮಿಕ ಶಿಕ್ಷಣ ಮಂಡಳಿ ನಡೆಸುವ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮಂಡಳಿಯ ಹೇಳಿಕೆ ತಿಳಿಸಿದೆ. 12ನೇ ತರಗತಿ ಪರೀಕ್ಷೆ ಮೇ ತಿಂಗಳಿನಲ್ಲಿ ಮತ್ತು 10ನೇ ತರಗತಿ ಪರೀಕ್ಷೆ ಜೂನ್‌ನಲ್ಲಿ ನಡೆಯಲಿದೆ ಎಂದು ಹೇಳಿಕೆ ತಿಳಿಸಿದೆ. ಈ ಪರೀಕ್ಷೆಗಳು ಅನುಕ್ರಮವಾಗಿ ಎಪ್ರಿಲ್ 23 ಮತ್ತು 29ರಂದು ನಡೆಯಬೇಕಿತ್ತು.

ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಪಕ್ಷಗಳ ಜನಪ್ರತಿನಿಧಿಗಳು, ಶಿಕ್ಷಣ ತಜ್ಞರು ಮತ್ತು ಪ್ರಮುಖ ತಂತ್ರಜ್ಞಾನ ಸಂಸ್ಥೆಗಳೊಂದಿಗೆ ಸಮಾಲೋಚಿಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವೆ ವರ್ಷಾ ಗಾಯಕ್ವಾಡ್ ಹೇಳಿದ್ದಾರೆ. ಕೊರೋನ ಸೋಂಕು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿಗಳು ಮತ್ತು ಪೋಷಕರು ಒತ್ತಾಯಿಸಿದ್ದರು. ಮಹಾರಾಷ್ಟ್ರದಲ್ಲಿ ಈಗ ಇರುವ ಕೊರೋನ ಸೋಂಕಿನ ಪರಿಸ್ಥಿತಿ ಪರೀಕ್ಷೆ ನಡೆಸಲು ಸೂಕ್ತವಲ್ಲ ಎಂಬ ಕಾರಣದಿಂದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವೆ ಹೇಳಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)