varthabharthi


ಕರ್ನಾಟಕ

ರಾಜ್ಯದಲ್ಲಿ ಒಂದೇ ದಿನ 52 ಮಂದಿ ಕೋವಿಡ್‍ಗೆ ಬಲಿ: 9,579 ಮಂದಿಗೆ ಸೋಂಕು ದೃಢ

ವಾರ್ತಾ ಭಾರತಿ : 12 Apr, 2021

ಬೆಂಗಳೂರು, ಎ. 12: ರಾಜ್ಯದಲ್ಲಿ ಯುಗಾದಿ ಹಬ್ಬಕ್ಕೆ ಮುನ್ನಾ ದಿನವಾದ ಸೋಮವಾರದಂದು 9,579 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಒಟ್ಟು 52 ಮಂದಿ ಸೋಂಕಿಗೆ ಬಲಿಯಾಗಿದ್ದು, 2,767 ಜನರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 10,74,869ಕ್ಕೆ ತಲುಪಿದ್ದು, ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 12,941ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣಗಳ ಸಂಖ್ಯೆ 75,985ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

52 ಸೋಂಕಿತರು ಬಲಿ: ಬೆಂಗಳೂರು ನಗರ-40, ಬೀದರ್ 2, ಮೈಸೂರು-3, ಚಾಮರಾಜನಗರ-2, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಚಿಕ್ಕಬಳ್ಳಾಪುರ, ರಾಮನಗರ ತಲಾ ಒಂದೊಂದು ಸೇರಿದಂತೆ ಒಟ್ಟು 52 ಮಂದಿ ಒಂದೇ ದಿನ ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಬುಲೇಟಿನ್ ತಿಳಿಸಿದೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 9,579 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 55, ಬಳ್ಳಾರಿ 132, ಬೆಳಗಾವಿ 39, ಬೆಂಗಳೂರು ಗ್ರಾಮಾಂತರ 192, ಬೆಂಗಳೂರು ನಗರ 6387, ಬೀದರ್ 465, ಚಾಮರಾಜನಗರ 39, ಚಿಕ್ಕಬಳ್ಳಾಪುರ 120, ಚಿಕ್ಕಮಗಳೂರು 57, ಚಿತ್ರದುರ್ಗ 22, ದಕ್ಷಿಣ ಕನ್ನಡ 73, ದಾವಣಗೆರೆ 40, ಧಾರವಾಡ 91, ಗದಗ 29, ಹಾಸನ 113, ಹಾವೇರಿ 36, ಕಲಬುರಗಿ 335, ಕೊಡಗು 24, ಕೋಲಾರ 96, ಕೊಪ್ಪಳ 31, ಮಂಡ್ಯ 86, ಮೈಸೂರು 362, ರಾಯಚೂರು 70, ರಾಮನಗರ 64, ಶಿವಮೊಗ್ಗ 43, ತುಮಕೂರು 239, ಉಡುಪಿ 101, ಉತ್ತರ ಕನ್ನಡ 64, ವಿಜಯಪುರ 122 ಹಾಗೂ ಯಾದಗಿರಿ ಜಿಲ್ಲೆಯಲ್ಲಿ 52 ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 6,387 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 40 ಜನರು ಮೃತಪಟ್ಟಿದ್ದಾರೆ. 1,038 ಸೋಂಕಿತರು ಬಿಡುಗಡೆಯಾಗಿದ್ದಾರೆ. ನಗರದಲ್ಲಿ ಇಲ್ಲಿಯವರೆಗೆ ಒಟ್ಟು 48,83,692 ಕೊರೋನ ಸೋಂಕಿತರು ದೃಢಪಟ್ಟಿದ್ದು, 4,855 ಜನರು ಸೋಂಕಿಗೆ ಬಲಿಯಾಗಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)