varthabharthi


ಕರ್ನಾಟಕ

ಮುಂದೂಡಿದ್ದ ಕೆ-ಸೆಟ್ ಪರೀಕ್ಷೆ ಎ.25ಕ್ಕೆ ನಿಗದಿ

ವಾರ್ತಾ ಭಾರತಿ : 15 Apr, 2021

ಬೆಂಗಳೂರು, ಎ.15: ಮೈಸೂರು ವಿಶ್ವವಿದ್ಯಾಲಯವು ಮುಂದೂಡಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಯನ್ನು ಎ.25(ರವಿವಾರ) ನಡೆಸಲು ತೀರ್ಮಾನಿಸಲಾಗಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವಿಶ್ವವಿದ್ಯಾಲಯವು, ಕೆ-ಸೆಟ್ 2021ರ ಪರೀಕ್ಷೆಯನ್ನು ನಡೆಸಲು ಪತ್ರದ ಮುಖಾಂತರ ಈಗಾಗಲೇ ಕರ್ನಾಟಕ ಸರಕಾರದ ಗಮನಕ್ಕೆ ತರಲಾಗಿದೆ. ಈ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಮಹಾನಗರಪಾಲಿಕೆ ಆಯುಕ್ತರು ಹಾಗೂ ಸಾರಿಗೆ ಅಧಿಕಾರಿಗಳ ಗಮನಕ್ಕೆ ತರಲಾಗುತ್ತಿದೆ ಎಂದು ವಿಶ್ವವಿದ್ಯಾಲಯದ ಸಂಯೋಜನಾಧಿಕಾರಿ ಮಾಹಿತಿ ನೀಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)