ಎ.22: ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
ಮಂಗಳೂರು, ಎ.16: ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲಾದ್ಯಂತ ಕೋವಿಡ್ -19 ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯ ಅಧೀನದಲ್ಲಿರುವ ಸಂಸ್ಥೆಗಳಲ್ಲಿ ಈ ವರ್ಷದ ಸೆಪ್ಟೆಂಬರ್ 30ರವರೆಗೆ ಕರ್ತವ್ಯ ನಿರ್ವಹಿಸಲು ಲ್ಯಾಬ್ ಟೆಕ್ನೀಷನ್-3, ಫಾರ್ಮಸಿಸ್ಟ್ -8 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಎ.22ರಂದು ಪೂ.11ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿುಲ್ಲಿ ನೇರ ಸಂದರ್ಶನ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲೋಕೋಪಯೋಗಿ ಕಟ್ಟಡ ಸಂಕೀರ್ಣ, ನೆಹರೂ ಮೈದಾನ ರಸ್ತೆ, ಮಂಗಳೂರು. ದೂ.ಸಂ: 0824-2423672ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯ ಪ್ರಕಟನೆ ತಿಳಿಸಿದೆ.
Next Story