ರಾಜ್ಯದಲ್ಲಿ 240 ಪೊಲೀಸರಿಗೆ ಕೋವಿಡ್ ದೃಢ
ಸಾಂದರ್ಭಿಕ ಚಿತ್ರ
ಬೆಂಗಳೂರು, ಎ.21: ಪೊಲೀಸ್ ಇಲಾಖೆಯಲ್ಲೂ ದಿನೇ ದಿನೇ ಕೊರೋನ ಸೋಂಕಿನ ಭೀತಿ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಪ್ರಸಕ್ತ 240 ಪೊಲೀಸರಿಗೆ ಸೋಂಕು ದೃಢಪಟ್ಟಿದೆ.
ಈ ಪೈಕಿ ಬೆಂಗಳೂರಿನಲ್ಲಿ ಅತೀ ಹೆಚ್ಚು ಪೊಲೀಸರಿಗೆ ಕೋವಿಡ್ ತಗುಲಿದ್ದು, 143 ಪೊಲೀಸರು ಸೋಂಕಿಗೆ ತುತ್ತಾಗಿದ್ದಾರೆ. ಇನ್ನು, ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬದಲ್ಲಿರುವ 45 ವರ್ಷ ಮೇಲ್ಪಟ್ಟ ಸದಸ್ಯರಿಗೆ ಮೊದಲನೆಯ ಹಾಗೂ ಎರಡನೆ ಕೋವಿಡ್ ಲಸಿಕೆ ಕಡ್ಡಾಯವಾಗಿ ಹಾಕಿಸಲು ಕ್ರಮ ಕೈಗೊಳ್ಳಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.
ಇದರ ಬೆನ್ನಲ್ಲೇ ಪೊಲೀಸ್ ಠಾಣೆ ಮತ್ತು ಕಚೇರಿಗಳ ಮುಂಭಾಗ ಸಾರ್ವಜನಿಕರ ಭೇಟಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದಾರೆ.
Next Story