ಕರ್ನಾಟಕ
ಒಂದು ಕೋಟಿ ಕೊರೋನ ಲಸಿಕೆ ಖರೀದಿಗೆ ರಾಜ್ಯ ಸರಕಾರ ನಿರ್ಧಾರ
ವಾರ್ತಾ ಭಾರತಿ : 22 Apr, 2021

ಬೆಂಗಳೂರು, ಎ.22: ರಾಜ್ಯಕ್ಕೆ ಒಂದು ಕೋಟಿ ಕೊರೋನ ಲಸಿಕೆ ಖರೀದಿಗೆ ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮೊದಲ ಹಂತದಲ್ಲಿ 400 ಕೋಟಿ ರೂ. ವೆಚ್ಚದಲ್ಲಿ ಲಸಿಕೆ ಖರೀದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ. ಇದರಿಂದಾಗಿ 18 ರಿಂದ 44 ವರ್ಷದವರಿಗೆ ಕೋವಿಡ್ ಲಸಿಕೆ ನೀಡಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)











