ಬೆಂಗಳೂರು
ಸೈಯದ್ ಇಸಾಕ್ ಗ್ರಂಥಾಲಯಕ್ಕೆ 8243 ಪುಸ್ತಕಗಳ ದಾನ: ಸಚಿವ ಸುರೇಶ್ ಕುಮಾರ್
ವಾರ್ತಾ ಭಾರತಿ : 27 Apr, 2021

ಸುರೇಶ್ ಕುಮಾರ್
ಬೆಂಗಳೂರು : ದುಷ್ಕರ್ಮಿಗಳ ಕೃತ್ಯಕ್ಕೆ ಬಲಿಯಾದ ಮೈಸೂರಿನ ಕನ್ನಡ ಪುಸ್ತಕ ಪ್ರೇಮಿ ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ 8243 ಪುಸ್ತಕಗಳನ್ನು ದಾನ ರೂಪದಲ್ಲಿ ಒದಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ದುಷ್ಕರ್ಮಿಗಳ ಕೃತ್ಯಕ್ಕೆ ಗ್ರಂಥಾಲಯ ಬಲಿಯಾದ ಸುದ್ದಿ ತಿಳಿದ ತಕ್ಷಣವೇ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕರಿಗೆ ಇಲಾಖೆಯಿಂದ ಪುಸ್ತಕಗಳನ್ನು ಒದಗಿಸಲು ಸೂಚಿಸಲಾಗಿತ್ತು. ಹಾಗೆಯೇ ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ನೆರವು ಒದಗಿಸುವಂತೆ ಕೋಲ್ಕತಾದ ರಾಜಾರಾಂ ಮೋಹನರಾಯ್ ಗ್ರಂಥಾಲಯ ಪ್ರತಿಷ್ಠಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)











