varthabharthi


ಕರ್ನಾಟಕ

ಬೆಳಗಾವಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಗೆ ಕೊರೋನ ದೃಢ

ವಾರ್ತಾ ಭಾರತಿ : 27 Apr, 2021

Image: Twitter.com/MangalAngadi

ಬೆಳಗಾವಿ, ಎ. 27: ಮಾಜಿ ಸಂಸದ ದಿವಂಗತ ಸುರೇಶ್ ಅಂಗಡಿಯವರ ಪತ್ನಿ, ಬೆಳಗಾವಿ ಲೋಕಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಕೊರೋನ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಅವರು ತಮ್ಮ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದು, 'ಕೋವಿಡ್ ತಪಾಸಣೆಗೆ ಒಳಪಟ್ಟಾಗ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ, ಆದರೂ ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರೈಂಟೈನ್ ಆಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ವೈದ್ಯರ ಸಲಹೆ ಪಡೆಯಲು ವಿನಂತಿಸಿಕೊಳ್ಳುತ್ತೇನೆ' ಎಂದು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)