varthabharthi


ಕರ್ನಾಟಕ

ಕಲಬುರಗಿಯಲ್ಲಿ ಆಕ್ಸಿಜನ್ ಕೊರತೆ ಆರೋಪ : ಮತ್ತೆ ಐವರು ಮೃತ್ಯು

ವಾರ್ತಾ ಭಾರತಿ : 4 May, 2021

ಸಾಂದರ್ಭಿಕ ಚಿತ್ರ

ಕಲಬುರಗಿ : ಆಕ್ಸಿಜನ್ ಕೊರತೆಯಿಂದ ಅಫ್ಝಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ನಾಲ್ವರು ಮತ್ತು ನಗರದ ಕ್ಯೂಪಿ ಆಸ್ಪತ್ರೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಎನ್ನಲಾದ ಘಟನೆ ಮಂಗಳವಾರ ನಡೆದಿದೆ.

ಅಫ್ಝಲಪುರ ತಾಲ್ಲೂಕು ಆಸ್ಪತ್ರೆಗೆ ಶಾಸಕ ಮತ್ತು ತಹಶೀಲ್ದಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ರೀತಿ ನಗರದ ಕ್ಯೂಪಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಓರ್ವ ರೋಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 5 ಮಂದಿ ಮೃತಪಟ್ಟಿದ್ದಾಗಿ ವರದಿಯಾಗಿತ್ತು.

 ಈ ಬಗ್ಗೆ ಜಿಲ್ಲಾಡಳಿತ ಯಾವುದೇ ಸ್ಪಷ್ಟ ಮಾಹಿತಿ ನೀಡಿಲ್ಲ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)