varthabharthi


ರಾಷ್ಟ್ರೀಯ

ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ: 4 ಸದಸ್ಯರ ತಂಡ ಕಳುಹಿಸಿಕೊಟ್ಟ ಗೃಹ ಸಚಿವಾಲಯ

ವಾರ್ತಾ ಭಾರತಿ : 6 May, 2021

ಹೊಸದಿಲ್ಲಿ: ಬಂಗಾಳದಲ್ಲಿ ನಡೆದ ಚುನಾವಣಾ ನಂತರದ ಹಿಂಸಾಚಾರದ ಬಗ್ಗೆ ಮಮತಾ ಬ್ಯಾನರ್ಜಿ ಸರಕಾರವು ಕೇಂದ್ರದಿಂದ ಎರಡನೇ ಪತ್ರ ಸ್ವೀಕರಿಸಿದ  ಒಂದು ದಿನದ ನಂತರ, ಕೇಂದ್ರ ಗೃಹ ಸಚಿವಾಲಯವು ನಾಲ್ಕು ಸದಸ್ಯರ ತಂಡವನ್ನು ರಾಜ್ಯಕ್ಕೆ ಕಳುಹಿಸಿಕೊಟ್ಟಿದೆ.

ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದ ತಂಡ ಬಂಗಾಳಕ್ಕೆ ತೆರಳಿದೆ.

ಹಿಂಸಾಚಾರದ ಬಗ್ಗೆ ವಿವರವಾದ ವರದಿಯನ್ನು ಕೋರಿದ್ದ, ಗೃಹ ಸಚಿವಾಲಯವು ಹೆಚ್ಚು ಸಮಯ ವ್ಯರ್ಥ ಮಾಡದೇ ಹಿಂಸಾಚಾರವನ್ನು  ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಬಂಗಾಳ ಸರಕಾರವನ್ನು ಕೇಳಿಕೊಂಡಿತ್ತು. ಮಮತಾ  ಬ್ಯಾನರ್ಜಿ ಅವರು ಸತತ ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ ಈ ಪತ್ರವನ್ನು ಕಳುಹಿಸಲಾಗಿದೆ.

ರವಿವಾರ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ, ಬಂಗಾಳದ ಕೆಲವು ಭಾಗಗಳಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ನಡುವೆ ಘರ್ಷಣೆಗಳು ನಡೆದಿವೆ. ಎರಡೂ ಪಕ್ಷಗಳು ಹಿಂಸಾಚಾರಕ್ಕೆ ಪರಸ್ಪರ ದೂಷಿಸಿಕೊಂಡಿವೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)