varthabharthi


ರಾಷ್ಟ್ರೀಯ

ತಮಿಳುನಾಡು ಮುಖ್ಯಮಂತ್ರಿಯಾಗಿ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಪ್ರಮಾಣ ವಚನ

ವಾರ್ತಾ ಭಾರತಿ : 7 May, 2021

ಚೆನ್ನೈ: ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರು ತಮಿಳುನಾಡಿನ ನೂತನ  ಮುಖ್ಯಮಂತ್ರಿಯಾಗಿ ತಮ್ಮ ಸಂಪುಟದ 33 ಸದಸ್ಯರೊಂದಿಗೆ ಶುಕ್ರವಾರ ಬೆಳಿಗ್ಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಚೆನ್ನೈನ ರಾಜ್ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬನ್ವರಿಲಾಲ್ ಪುರೋಹಿತ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ.

 ಸ್ಟಾಲಿನ್ ಅವರು ಗೃಹ ಸಚಿವರಾಗಿಯೂ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸ್ಟಾಲಿನ್ ಅವರು  ಆಡಳಿತ ಮತ್ತು ಪೊಲೀಸ್ ಸೇವೆಗಳು, ವಿಶೇಷ ಕಾರ್ಯಕ್ರಮಗಳು ಮತ್ತು ವಿಭಿನ್ನ ಸಾಮರ್ಥ್ಯದ ವ್ಯಕ್ತಿಗಳ ಕಲ್ಯಾಣಕ್ಕೆ ಸಂಬಂಧಿಸಿದ ಹಲವಾರು ಖಾತೆಗಳನ್ನು ಹೊಂದಿದ್ದಾರೆ.

ರಾಜ್ಯವು ತೀವ್ರವಾದ ಎರಡನೇ ಕೋವಿಡ್ ಅಲೆಯೊಂದಿಗೆ ಹೋರಾಡುತ್ತಿರುವಾಗ ಸ್ಟಾಲಿನ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. 

ಹೊಸ ಜಲಸಂಪನ್ಮೂಲ ಸಚಿವರಾಗಿ ಹಿರಿಯ ಡಿಎಂಕೆ ನಾಯಕ ದುರೈಮುರುಗನ್ ಪ್ರಮಾಣವಚನ ಸ್ವೀಕರಿಸಿದರು. ಮುರುಗನ್  ಅವರು ಮಾಜಿ ಸಚಿವರು ಮತ್ತು ವೆಲ್ಲೂರು ಜಿಲ್ಲೆಯ ಕಟ್ಪಾಡಿ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿದ್ದಾರೆ. ಆಗಾಗ್ಗೆ ಬರಗಾಲದಿಂದ ಬಳಲುತ್ತಿರುವ ರಾಜ್ಯಕ್ಕೆ ಈ ಖಾತೆ ನಿರ್ಣಾಯಕವಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)