varthabharthi


ಕರಾವಳಿ

ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷ ಅಬೂಬಕರ್ ಪಲ್ಲಮಜಲು ಕೋವಿಡ್ ಗೆ ಬಲಿ

ವಾರ್ತಾ ಭಾರತಿ : 7 May, 2021

ಮಂಗಳೂರು, ಮೇ 7: ಕೋವಿಡ್-19 ಸೋಂಕಿಗೆ ಪಾಸಿಟಿವ್ ಆಗಿದ್ದ ಅಖಿಲ ಭಾರತ ಬ್ಯಾರಿ ಪರಿಷತ್, ಮಂಗಳೂರು ಇದರ ಅಧ್ಯಕ್ಷ ಅಬೂಬಕರ್ ಪಲ್ಲಮಜಲು(48) ಶುಕ್ರವಾರ ಬೆಳಗ್ಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಅವರು ಕಳೆದ ಐದು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದರೆಂದು ಕುಟುಂಬದ ಮೂಲಗಳು ತಿಳಿಸಿವೆ.

ಪಲ್ಲಮಲಜು ಹಯಾತುಲ್ ಇಸ್ಲಾಂ ಜುಮಾ ಮಸೀದಿಯ ಮಾಜಿ ಅಧ್ಯಕ್ಷರಾಗಿದ್ದ ಇವರು ಹಲವು ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)