varthabharthi


ಕರ್ನಾಟಕ

ಹಿರಿಯ ಕಾರ್ಮಿಕ ಮುಖಂಡ ರಾಮಚಂದ್ರಪ್ಪ ನಿಧನ

ವಾರ್ತಾ ಭಾರತಿ : 8 May, 2021

ದಾವಣಗೆರೆ, ಮೇ 8: ಸಿಪಿಐ ರಾಜ್ಯ ಸಹ ಕಾರ್ಯದರ್ಶಿ, ಎಐಟಿಯುಸಿ ಕಾರ್ಯಾಧ್ಯಕ್ಷ, ಅಂಗನವಾಡಿ ಕಾರ್ಯಕರ್ತೆಯರ ಫೆಡರೇಷನ್ ರಾಜ್ಯಾಧ್ಯಕ್ಷ ಹಾಗೂ ಹಿರಿಯ ಕಾರ್ಮಿಕ ಮುಖಂಡ ಎಚ್.ಕೆ.ರಾಮಚಂದ್ರಪ್ಪ (78) ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮೇ 9ರಂದು ಮಧ್ಯಾಹ್ನ 12ಗಂಟೆಗೆ ಆರ್.ಎಚ್. ಬೃಂದಾವನದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಅನಾರೋಗ್ಯದಿಂದ ನಗರದ ಆರೈಕೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಶನಿವಾರ ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

1963 ರಿಂದಲೇ ಕಮ್ಯುನಿಷ್ಟ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಎಚ್.ಕೆ. ರಾಮಚಂದ್ರಪ್ಪ, ಸಿಪಿಐ, ಎಐಟಿಯುಸಿ ಕಾರ್ಯಾಧ್ಯಕ್ಷ, ಸಿಪಿಐ ರಾಜ್ಯ ಸಹ ಕಾರ್ಯದರ್ಶಿ, ದಾವಣಗೆರೆ ಜಿಲ್ಲಾ ಸಿಪಿಐ ಕಾರ್ಯದರ್ಶಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಫೆಡೆರೇಷನ್ ರಾಜ್ಯಾಧ್ಯಕ್ಷ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಬಡವರ ಸೇವೆ ಮಾಡಿದ್ದರು.

ಸಂತಾಪ: ಹಿರಿಯ ಕಾರ್ಮಿಕ ಮುಖಂಡ ಎಚ್.ಕೆ. ರಾಮಚಂದ್ರಪ್ಪಅವರ ನಿಧನಕ್ಕೆ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)