varthabharthi


ಕರ್ನಾಟಕ

ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 11 ಮಂದಿ ಮೃತ್ಯು

ವಾರ್ತಾ ಭಾರತಿ : 11 May, 2021

ಚಾಮರಾಜನಗರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೊರೋನ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರಲ್ಲಿ ಸೋಮವಾರ ಬೆಳಗ್ಗೆ 9 ಗಂಟೆಯಿಂದ ಮಂಗಳವಾರ ಬೆಳಗ್ಗೆ 9ಗಂಟೆಯ ಅವಧಿಯಲ್ಲಿ 11 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿರುವ ಕೋವಿಡ್ ಸೋಂಕಿತರಿಗೆ ವೈದ್ಯರು ನೀಡಲಾಗುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೆ 24 ಗಂಟೆಗಳ ಅಂತರದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್ ಸೋಂಕು ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಇಂದಿನಿಂದ ಟಫ್ ರೂಲ್ಸ್ ಜಾರಿಗೊಳಿಸುವ ಮೂಲಕ ಲಾಕ್ ಡೌನ್ ಗೆ ಮುಂದಾಗಿದೆ. ಇಷ್ಟೆಲ್ಲಾ ಕಟ್ಟೆಚ್ಚರ ಇದ್ದರೂ ಸಹ ಚಾಮರಾಜನಗರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣವೂ ಸಹ ಅಧಿಕವಾಗುತ್ತಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ಬಗ್ಗೆ ಹಾಗೂ ಸೋಂಕಿತರು ಸಾವನ್ನಪ್ಪುತ್ತಿರುವ ಸಂಖ್ಯೆ ಅಧಿಕವಾಗುತ್ತಿರುವ ಬಗ್ಗೆ ಜಿಲ್ಲೆಯ ಜನತೆ ತೀರಾ ಆತಂಕದಲ್ಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)