ಕಾಳಸಂತೆಯಲ್ಲಿ ರೆಮ್ಡೆಸಿವಿರ್ ಚುಚ್ಚುಮದ್ದು ಮಾರಾಟ: ಆ್ಯಂಬುಲೆನ್ಸ್ ಚಾಲಕ ಸೇರಿ ಇಬ್ಬರ ಬಂಧನ
ಬೆಂಗಳೂರು, ಮೇ 11: ಕಾಳಸಂತೆಯಲ್ಲಿ ರೆಮ್ಡೆಸಿವಿರ್ ಚುಚ್ಚುಮದ್ದು ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಸಂತೋಷ್ ಹಾಗೂ ಸುನೀಲ್ ಎಂಬುವರು ಬಂಧಿತ ಆರೋಪಿಗಳೆಂದು ಪೊಲೀಸರು ಹೇಳಿದ್ದಾರೆ.
ಬಂಧಿತ ಇಬ್ಬರಿಂದಲೂ 8 ರೆಮ್ಡೆಸಿವಿರ್ ಜಪ್ತಿ ಮಾಡಲಾಗಿದ್ದು, ಈ ಪೈಕಿ ಸಂತೋಷ್ ಖಾಸಗಿ ಆಸ್ಪತ್ರೆ ಸಿಬ್ಬಂದಿಯಾಗಿದ್ದು, ಮತ್ತೋರ್ವ ಆ್ಯಂಬುಲೆನ್ಸ್ ಚಾಲಕನಾಗಿದ್ದಾನೆ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ, ತನಿಖೆ ಕೈಗೊಳ್ಳಲಾಗಿದೆ.
Next Story