ದ.ಕ. ಜಿಲ್ಲೆ : ಕೋವಿಡ್ಗೆ ಮತ್ತೆ 5 ಬಲಿ; 915 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಮೇ 11: ದ.ಕ. ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 5 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 795ಕ್ಕೇರಿದೆ. ಅಲ್ಲದೆ ಮಂಗಳವಾರ ಜಿಲ್ಲೆಯಲ್ಲಿ 915 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 1,024 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಈವರಗೆ 7,86,739 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,28,273 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 58,466 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 45,043 ಮಂದಿ ಗುಣಮುಖರಾಗಿದ್ದಾರೆ.
ಸದ್ಯ 12,628 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಸ್ಕ್ ನಿಯಮ ಉಲ್ಲಂಘಿಸಿದ 53,568 ಮಂದಿಯಿಂದ 55,91,730 ರೂ. ದಂಡ ವಸೂಲು ಮಾಡಲಾಗಿದೆ.
Next Story