varthabharthi


ಕರಾವಳಿ

ಕುಂದಾಪುರ ಫ್ಲೈಓವರ್‌ ನಲ್ಲಿ ಅಪಘಾತ: ಮಹಿಳೆ ಮೃತ್ಯು

ವಾರ್ತಾ ಭಾರತಿ : 16 May, 2021

 ಕುಂದಾಪುರ, ಮೇ 16: ಕುಂದಾಪುರದ ಫ್ಲೈಓವರ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ಕಾರೊಂದು ಅಪಘಾತಕ್ಕೀಡಾದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ರವಿವಾರ ನಡೆದಿದೆ.

ಮೃತರನ್ನು ಬೈಂದೂರಿನ ಬಂಟವಾಡಿಯ ವಸಂತಿ(35) ಎಂದು ಗುರುತಿಸಲಾಗಿದೆ.

ಸಾಸ್ತಾನದಿಂದ ಹಟ್ಟಿಕುದ್ರುಗೆ ಹೋಗುತ್ತಿದ್ದ ಕಾರು, ಟಯರ್ ಸ್ಪೋಟಗೊಂಡ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ವಸಂತಿ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆನ್ನಲಾಗಿದೆ. ಕಾರಿನಲ್ಲಿ ಒಟ್ಟು ಐವರಿದ್ದು, ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)