ಕರ್ನಾಟಕ
ಕಾಂಗ್ರೆಸ್ ವಿರುದ್ಧ ಆಧಾರ ರಹಿತ ಹೇಳಿಕೆ ಆರೋಪ: ಸಿ.ಟಿ.ರವಿ ವಿರುದ್ಧ ಪೊಲೀಸ್ ಠಾಣೆಗೆ ದೂರು

ಬೆಂಗಳೂರು, ಮೇ 19: ಪದೇ ಪದೇ ಕಾಂಗ್ರೆಸ್ ಪಕ್ಷದ ಮೇಲೆ ಬಿಜೆಪಿ ಮುಖಂಡ ಸಿ.ಟಿ. ರವಿ ಆಧಾರ ರಹಿತವಾದ ಆರೋಪವನ್ನು ಮಾಡುತ್ತಿದ್ದು, ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರು ಇಲ್ಲಿನ ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರು.
ಬುಧವಾರ ಈ ಕುರಿತು ಪ್ರತಿಕ್ರಿಯಿಸಿದ ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿ.ತೇಜಸ್ ಕುಮಾರ್, ಇಡೀ ದೇಶವೇ ಕೋವಿಡ್‍ದಿಂದ ನರಳುತ್ತಿರುವ ಸಂದರ್ಭದಲ್ಲಿ ಬಿಜೆಪಿ ನಾಯಕ ಸಿ.ಟಿ.ರವಿ ಅವರು ಜನರಿಗೆ ತಪ್ಪು ಸಂದೇಶವನ್ನು ರವಾನಿಸಿ, ಜನರಲ್ಲಿ ಭಯ ಭೀತಿ ಉಂಟು ಮಾಡುವ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಸಿ.ಟಿ.ರವಿ ಅವರು ಕೋವಿಡ್ ವಿಚಾರವಾಗಿ ಕಾಂಗ್ರೆಸ್ ಪಕ್ಷ ಜನರ ದಾರಿ ತಪ್ಪಿಸುತ್ತಿದ್ದು, ಜನರ ಜೀವಗಳಿಗೆ ಯಮನಂತಾಗಿದೆ. ಅಷ್ಟೇಅಲ್ಲದೆ, ದೇಶ ಮತ್ತು ವಿದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರಕಾರದ ವಿರುದ್ಧ ಅಪಪ್ರಚಾರ ಮಾಡಲು ಟೂಲ್ ಕಿಟ್ ರೂಪಿಸಿದೆ ಎಂದು ಸುಳ್ಳು ಮಾತನಾಡುಗಳನ್ನಾಡಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ದೂರು ಸಲ್ಲಿಸಲಾಗಿದೆ ಎಂದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ










