varthabharthi


ಕರಾವಳಿ

ಅಡ್ಯಾರ್: ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ, ಓರ್ವ ಗಂಭೀರ

ವಾರ್ತಾ ಭಾರತಿ : 28 May, 2021

ಮಂಗಳೂರು, ಮೇ 28: ರಾಷ್ಟ್ರೀಯ ಹೆದ್ದಾರಿ 75ರ ನಗರ ಹೊರವಲಯದ ಅಡ್ಯಾರ್ ಎಂಬಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಮೃತರನ್ನು ಪುದು ಗ್ರಾಮದ ಅಮೆಮಾರ್ ನಿವಾಸಿ ದಾವೂದ್(22) ಹಾಗೂ ಕುಂಜತ್ಕಲ ನಿವಾಸಿ ಉನೈಸ್(27) ಎಂದು ಗುರುತಿಸಲಾಗಿದೆ. ಇನ್ನೋರ್ವ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಮಂಗಳೂರಿನ ದಕ್ಕೆಯಲ್ಲಿ ಒಣ ಮೀನು ವ್ಯಾಪಾರಿಗಳಾಗಿದ್ದರು.

ಮಂಗಳೂರಿನಿಂದ ಫರಂಗಿಪೇಟೆ ಕಡೆಗೆ ಬರುತ್ತಿದ್ದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಡ್ಯಾರ್ ಮಾಂಡೋವಿ ಕಾರು ಶೋ ರೂಂ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಢಿಕ್ಕಿ ಹೊಡದಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಓಮ್ನಿ ಸಂಫೂರ್ಣ ನಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)