ದ.ಕ ಜಿಲ್ಲಿಯಲ್ಲಿ ಗುರುವಾರ ಕೋವಿಡ್ಗೆ 8 ಮಂದಿ ಬಲಿ; 580 ಮಂದಿಗೆ ಸೋಂಕು ದೃಢ
ಸಾಂದರ್ಭಿಕ ಚಿತ್ರ
ಮಂಗಳೂರು, ಜೂ.10: ದ.ಕ. ಜಿಲ್ಲೆಯಲ್ಲಿ ಗುರುವಾರ 8 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 969ಕ್ಕೇರಿದೆ. ಅಲ್ಲದೆ ಗುರುವಾರ ಜಿಲ್ಲೆಯಲ್ಲಿ 580 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಪಾಸಿಟಿವ್ ಶೇ.16 ಇದೆ. ಇದರೊಂದಿಗೆ ಈವರೆಗೆ ಜಿಲ್ಲೆಯಲ್ಲಿ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 82,174ಕ್ಕೇರಿದೆ. ಗುರುವಾರ 625 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 74,272ಕ್ಕೇರಿದೆ.
ಸದ್ಯ ಜಿಲ್ಲೆಯಲ್ಲಿ 6,932 ಸಕ್ರಿಯ ಪ್ರಕರಣವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರಗೆ 8,83,237 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 8,01,063 ಮಂದಿಯ ವರದಿ ನೆಗೆಟಿವ್ ಬಂದಿದೆ.
ದಂಡ ವಸೂಲಿ: ಮಾಸ್ಕ್ ನಿಯಮ ಉಲ್ಲಂಘಿಸಿದ 62,503 ಮಂದಿಯಿಂದ 73,39,667 ರೂ. ದಂಡ ವಸೂಲು ಮಾಡಲಾಗಿದೆ.
Next Story