varthabharthi


ಕ್ರೀಡೆ

ರಾಹುಲ್, ಮಯಾಂಕ್ ಅಗರ್ವಾಲ್ ಗೆ ಸ್ಥಾನವಿಲ್ಲ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: ಟೀಮ್ ಇಂಡಿಯಾ ಪ್ರಕಟಿಸಿದ ಬಿಸಿಸಿಐ

ವಾರ್ತಾ ಭಾರತಿ : 15 Jun, 2021

ಹೊಸದಿಲ್ಲಿ: ನ್ಯೂಝಿಲ್ಯಾಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಬಿಸಿಸಿಐ ಮಂಗಳವಾರ 15 ಸದಸ್ಯರುಗಳನ್ನೊಳಗೊಂಡ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ.

ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್  ಸೌತಾಂಪ್ಟನ್‌ನಲ್ಲಿ ಶುಕ್ರವಾರದಿಂದ ಆರಂಭವಾಗಲಿದೆ.

ವಿರಾಟ್ ಕೊಹ್ಲಿ ನೇತೃತ್ವದ ತಂಡದಲ್ಲಿ ಕನ್ನಡಿಗರಾದ ಮಯಾಂಕ್ ಅಗರ್ವಾಲ್ ಹಾಗೂ ಕೆ.ಎಲ್.ರಾಹುಲ್  ಗೆ ಸ್ಥಾನ ನೀಡಲಾಗಿಲ್ಲ. ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ ಅವರನ್ನು ಆರಂಭಿಕ ಜೋಡಿಯಾಗಿ ಆಯ್ಕೆ ಮಾಡಲಾಗಿದ್ದು, ಮಯಾಂಕ್ ಹಾಗೂ ರಾಹುಲ್  ಅನುಪಸ್ಥಿತಿ ಎದ್ದು ಕಾಣುತ್ತಿದೆ. ಇಂಗ್ಲೆಂಡ್ ವಿರುದ್ಧ ಸ್ವದೇಶದಲ್ಲಿ ನಡೆದ ಟೆಸ್ಟ್ ನಿಂದ ದೂರ ಉಳಿದಿದ್ದ ಹನುಮ ವಿಹಾರಿ ತಂಡಕ್ಕೆ ವಾಪಸಾಗಿದ್ದಾರೆ.

ಟೀಮ್ ಇಂಡಿಯಾದ ವೇಗದ ಬೌಲಿಂಗ್ ವಿಭಾಗದ ನೇತೃತ್ವವನ್ನು ಜಸ್ಪ್ರೀತ್ ಬುಮ್ರಾ, ಮುಹಮ್ಮದ್ ಶಮಿ, ಇಶಾಂತ್ ಶರ್ಮಾ ಹಾಗೂ ಉಮೇಶ್ ಯಾದವ್ ವಹಿಸಿದ್ದಾರೆ. ಭರವಸೆಯ ಯುವ ಪ್ರತಿಭೆಗಳಾದ ಮುಹಮ್ಮದ್ ಸಿರಾಜ್ ಹಾಗೂ  ರಿಷಭ್ ಪಂತ್ ಕೂಡ 15 ಮಂದಿಯ ತಂಡದಲ್ಲಿ ಸೇರಿದ್ದಾರೆ.

ಟೀಮ್ ಇಂಡಿಯಾ:

ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ(ಉಪ ನಾಯಕ), ರೋಹಿತ್ ಶರ್ಮಾ, ಶುಭಮನ್  ಗಿಲ್, ಚೇತೇಶ್ವರ ಪೂಜಾರ,  ರಿಷಭ್ ಪಂತ್, ರವೀಂದ್ರ ಜಡೇಜ, ಹನುಮ ವಿಹಾರಿ, ಉಮೇಶ್ ಯಾದವ್, ರವಿಚಂದ್ರನ್ ಅಶ್ವಿನ್, ಮುಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮುಹಮ್ಮದ್ ಸಿರಾಜ್, ವೃದ್ಧಿಮಾನ್ ಸಹಾ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)