ಉಡುಪಿ: ಬುಧವಾರ ಜಿಲ್ಲೆಯಲ್ಲಿ ಲಸಿಕೆ ಲಭ್ಯತೆ ವಿವರ
ಉಡುಪಿ, ಜೂ.22: ಜಿಲ್ಲೆಯಲ್ಲಿ ನಾಳೆ ಜೂ.23ರಂದು 18ರಿಂದ 44 ವರ್ಷ ವಯೋಮಿತಿಯ ಯಾರಿಗೂ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆದರೆ ಜೂ.23ರಂದು ಬೆಳಗ್ಗೆ 9:30ರಿಂದ ಸಂಜೆ 4:30ರವರೆಗೆ ಉಡುಪಿ ನಗರಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳಿಗೆ, ಆದ್ಯತಾ ಗುಂಪಿನವರಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಹಾಗೂ 45 ವರ್ಷ ಮೇಲಿನ ಸಾರ್ವಜನಿಕರಿಗೆ ಪ್ರಥಮ ಡೋಸ್ ಮತ್ತು ಎರಡನೇ ಡೋಸ್ ಕೋವಿಡ್-19ನ್ನು ನೀಡಲಾಗುವುದು.
ಆಸ್ಪತ್ರೆಗಳ ವಿವರ: ಅಜ್ಜರಕಾಡು ಜಿಲ್ಲಾಸ್ಪತ್ರೆಯ ಸೈಂಟ್ ಸಿಸಿಲೀಸ್ ಶಾಲಾ ಲಸಿಕಾ ಕೇಂದ್ರ (ಕೋವಿಶೀಲ್ಡ್ನ 200 ಡೋಸ್), ಉಡುಪಿ ಕಡಿಯಾಳಿಯ ಕಮಲಾಬಾಯಿ ಪ್ರೌಢ ಶಾಲೆ (ಕೋವಿಶೀಲ್ಡ್ನ 300 ಡೋಸ್), ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಮಾಧವ ಕೃಪಾ ಶಾಲೆ (ಕೋವಿಶೀಲ್ಡ್ 280 ಡೋಸ್ ಹಾಗೂ ಕೋವ್ಯಾಕ್ಸಿನ್ 70 ಡೋಸ್).
ಉಡುಪಿಯ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್ಶೆಟ್ಟಿ) ಆಸ್ಪತ್ರೆಯಲ್ಲಿ ಜೂ.25ರೊಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (150 ಡೋಸ್) ಲಭ್ಯವಿದೆ.
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 ಪ್ರಥಮ ಡೋಸ್ಹಾಗೂ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆಯನ್ನು ಅಥವಾ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿ ಕೊಂಡು ಬುಧವಾರ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಡಿಎಚ್ಓ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.