varthabharthi


ಕರಾವಳಿ

ಜೂ. 24:ಎಸ್ಸೆಸ್ಸೆಫ್ ನಿಂದ ರಿಸರ್ಚ್ ಕಾರ್ಯಾಗಾರ

ವಾರ್ತಾ ಭಾರತಿ : 23 Jun, 2021

ಮಂಗಳೂರು : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ವತಿಯಿಂದ ಎಸ್ಸೆಸ್ಸೆಫ್ ಜಿಲ್ಲಾ ಪದಾಧಿಕಾರಿಗಳಿಗಾಗಿ ರಿಸರ್ಚ್ ಕಾರ್ಯಾಗಾರವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ ಲತೀಫ್ ಸಅದಿ ಶಿವಮೊಗ್ಗ ಅಧ್ಯಕ್ಷತೆಯಲ್ಲಿ ಜೂನ್ 24ರ ರಾತ್ರಿ 9 ಗಂಟೆಗೆ ಝೂಮ್ ಅಪ್ಲಿಕೇಷನ್ ಮೂಲಕ ನಡೆಯಲಿದೆ.

ಎಸ್ಸೆಸ್ಸೆಫ್ ಮಾಜಿ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಡಾ. ಅಬ್ದುಲ್ ಸಲಾಂ ಮುಸ್ಲಿಯಾರ್ ತರಗತಿಯನ್ನು ಮಂಡಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಹಾಗೂ ಕೋಶಾಧಿಕಾರಿ ಹಾಫಿಳ್ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ಹಾಗೂ ರಾಜ್ಯ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ.  ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ನೌಫಳ್ ಸಖಾಫಿ ಕಳಸ ಸ್ವಾಗತಿಸಿ,ರಾಜ್ಯ ನಾಯಕ ಮಹಮ್ಮದಲಿ ತುರ್ಕಳಿಕೆ ವಂದಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ನವಾಝ್ ಭಟ್ಕಳ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)