varthabharthi


ರಾಷ್ಟ್ರೀಯ

ಮಾನಹಾನಿ ಪ್ರಕರಣ: ಹೇಳಿಕೆ ದಾಖಲಿಸಲು ಗುಜರಾತ್ ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಹಾಜರು

ವಾರ್ತಾ ಭಾರತಿ : 24 Jun, 2021

ಹೊಸದಿಲ್ಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಗುಜರಾತ್‌ನ ಸೂರತ್‌ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಗುರುವಾರ ಆಗಮಿಸಿದ್ದು, "ಮೋದಿ ಉಪನಾಮ" ಕುರಿತು ಬಿಜೆಪಿ ಶಾಸಕರೊಬ್ಬರು ಸಲ್ಲಿಸಿದ ಕ್ರಿಮಿನಲ್ ಮಾನಹಾನಿ ಮೊಕದ್ದಮೆಗೆ ಸಂಬಂಧಿಸಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.

ಸೂರತ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎ.ಎನ್.ದವೆ ಅವರು ಸೂರತ್‌ ಶಾಸಕ  ಪೂರ್ಣೇಶ್ ಮೋದಿ ಸಲ್ಲಿಸಿದ್ದ ಪ್ರಕರಣದಲ್ಲಿ ತಮ್ಮ ಅಂತಿಮ ಹೇಳಿಕೆಯನ್ನು ದಾಖಲಿಸುವಂತೆ ರಾಹುಲ್ ಗಾಂಧಿ ಅವರಿಗೆ ಕಳೆದ ವಾರ ನಿರ್ದೇಶನ ನೀಡಿದ್ದರು.

ಪೂರ್ಣೇಶ್ ಮೋದಿಯವರು ಸಲ್ಲಿಸಿರುವ ದೂರಿನಲ್ಲಿ ಕಾಂಗ್ರೆಸ್ ಸಂಸದರು 2019 ರ ಎಪ್ರಿಲ್‌ನಲ್ಲಿ ಕರ್ನಾಟಕದಲ್ಲಿ ರಾಷ್ಟ್ರೀಯ ಚುನಾವಣೆಗೆ ಮುನ್ನ ನಡೆದ ರ್ಯಾಲಿಯೊಂದರಲ್ಲಿ ತಮ್ಮ ಭಾಷಣದಲ್ಲಿ "ಇಡೀ ಮೋದಿ ಸಮುದಾಯವನ್ನು ನಿಂದಿಸಿದ್ದಾರೆ" ಎಂದು ಆರೋಪಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)