ಕೌಶಲ ಅಭಿವೃದ್ಧಿ ಯೋಜನೆಯಡಿ ವಿವಿಧ ತರಬೇತಿಗೆ ಅರ್ಜಿ ಆಹ್ವಾನ
ಮಂಗಳೂರು, ಜು.6: ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2021-22ನೇ ಸಾಲಿನ ರಾಜ್ಯದ ಅಲ್ಪಸಂಖ್ಯಾತರ ಯುವಕ/ಯುವತಿಯವರಿಗೆ ಕೌಶಲ ಅಭಿವೃದ್ಧಿ ಯೋಜನೆಯಡಿ ವಿವಿಧ ತರಬೇತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು https://docs.google.com/forms/d/e/1FAIpQLSe9TPjvO6JPH75D4l_ePz-bYN0WJszgEd1AxNPnUwRiMkL0nQ/viewform ಮೂಲಕ ಅರ್ಜಿ ಸಲ್ಲಿಸಿ ಪ್ರತಿ ಹಾಗೂ ದಾಖಲಾತಿಗಳನ್ನು ಕಾರ್ಯಾಲಯಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಜು.9 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story