varthabharthi


ಮಾಹಿತಿ - ಮಾರ್ಗದರ್ಶನ

ಪಿಎಂಇಜಿಪಿ ಯೋಜನೆಗೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 13 Jul, 2021

ಉಡುಪಿ, ಜು.13: ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ)ಯಡಿ ಜಿಲ್ಲೆಯಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯೋಜನೆಯಡಿ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಗರಿಷ್ಠ ಯೋಜನಾ ವೆಚ್ಚ 25 ಲಕ್ಷ ರೂ. ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಯೋಜನಾ ವೆಚ್ಚದ ಮೇಲೆ ಶೇ.15ರಿಂದ 35ರವರೆಗೆ ಸಹಾಯಧನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿಯನ್ನು ವೆಬ್‌ಸೈಟ್ - https://www.kviconline.gov.in/pmegpeportal/jsp/pmegponline. jsp- ಮೂಲಕ ಸಲ್ಲಿಸುವಾಗ ಫೋಟೊ, ಯೋಜನಾ ವರದಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಜನಸಂಖ್ಯೆ ಪ್ರಮಾಣ ಪತ್ರ ಹಾಗೂ ವಿದ್ಯಾಭ್ಯಾಸದ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿದ ನಂತರ ಅರ್ಜಿಯನ್ನು ಪ್ರಿಂಟ್ ಮಾಡಿ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2575650, ಜಿಲ್ಲಾ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, 2ನೇ ಮಹಡಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574855, ರಾಜ್ಯ ನಿರ್ದೇಶಕರು, ಖಾದಿ ಗ್ರಾಮೋದ್ಯೋಗ ಆಯೋಗ, ದೂರವಾಣಿ ನಗರ, ವಿಜಿನಾಪುರ, ಬೆಂಗಳೂರು ದೂ.ಸಂಖ್ಯೆ: 080-25665885 / 080-25665883 ಹಾಗೂ ಪ್ರಾದೇಶಿಕ ಕಛೇರಿ, ಕಾಯರ್ ಬೋರ್ಡ್, ನಂ: 3ಎ, ಪೀಣ್ಯಾ ಕೈಗಾರಿಕಾ ಪ್ರದೇಶ, ಟಿವಿಎಸ್ ಕ್ರಾಸ್ ಹತ್ತಿರ, ಬೆಂಗಳೂರು, ದೂ.ಸಂಖ್ಯೆ: 080- 28375023 ಇವರ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಹಾಗೂ ಉಡುಪಿ, ಕಾರ್ಕಳ ಅಥವಾ ಕುಂದಾಪುರ ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)