varthabharthi


ಮಾಹಿತಿ - ಮಾರ್ಗದರ್ಶನ

ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಅರ್ಜಿ ಆಹ್ವಾನ

ವಾರ್ತಾ ಭಾರತಿ : 13 Jul, 2021

ಮಂಗಳೂರು, ಜು.13: ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ದ.ಕ. ಜಿಲ್ಲೆಯ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸ್ವ-ಉದ್ಯೋಗ ಕೈಗೊಳ್ಳಲು ಬ್ಯಾಂಕುಗಳಿಂದ ಸಾಲ, ಸಹಾಯಧನ ಸೌಲಭ್ಯ ನೀಡುವ ನೀಡಲಾಗುತ್ತಿದ್ದು, ಡಿಐಸಿ, ಕೆವಿಐಸಿ, ಕೆವಿಐಬಿ ಅನುಷ್ಠಾನ ಇಲಾಖೆಗಳಾಗಿವೆ. ಅರ್ಹರು ಅಂತರ್ಜಾಲ ತಾಣ https://www.kviconline.gov.in/  ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ದೂ.ಸಂ.: 0824-2214021 ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)