varthabharthi


ಕರ್ನಾಟಕ

ಜುಲೈ 19 ರಿಂದ ಎಸೆಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಮುಖ್ಯಮಂತ್ರಿ ಯಡಿಯೂರಪ್ಪ

ವಾರ್ತಾ ಭಾರತಿ : 18 Jul, 2021

ಬೆಂಗಳೂರು, ಜು.18: ಜುಲೈ 19 ಮತ್ತು 22ರಂದು ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭಹಾರೈಸಿ ಟ್ವೀಟ್ ಮಾಡಿದ್ದಾರೆ.

`ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೆ ಶುಭ ಹಾರೈಕೆಗಳು. ಎಲ್ಲರೂ ಶಾಂತಚಿತ್ತರಾಗಿ, ಏಕಾಗ್ರತೆಯಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ. ಪರೀಕ್ಷೆಗಳನ್ನು ಅತ್ಯಂತ ಸುರಕ್ಷಿತವಾಗಿ ಮತ್ತು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಎಲ್ಲ ವ್ಯವಸ್ಥೆಗಳನ್ನು ಮಾಡಿದೆ ಎಂದು ಪಾಲಕರಿಗೆ ಭರವಸೆ ನೀಡುತ್ತೇನೆ' ಎಂದು ಹೇಳಿದ್ದಾರೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)