varthabharthi


ರಾಷ್ಟ್ರೀಯ

ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ನವಜೋತ್‌ ಸಿಂಗ್‌ ಸಿಧು ನೇಮಕ

ವಾರ್ತಾ ಭಾರತಿ : 18 Jul, 2021

ಹೊಸದಿಲ್ಲಿ: ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ವಿರೋಧದ ಹೊರತಾಗಿಯೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಪಂಜಾಬ್ ಘಟಕದ ಹೊಸ ಅಧ್ಯಕ್ಷರಾಗಿ ನವಜೋತ್ ಸಿಂಗ್ ಸಿಧು ಅವರನ್ನು ರವಿವಾರ ನೇಮಕ ಮಾಡಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ಧತೆಗಾಗಿ ಸಿಧುಗೆ ಸಹಾಯ ಮಾಡಲು ಸೋನಿಯಾ ಗಾಂಧಿ ನಾಲ್ಕು ಕಾರ್ಯಕಾರಿ ಅಧ್ಯಕ್ಷರನ್ನೂ ನೇಮಿಸಿದ್ದಾರೆ ಎಂದು ತಿಳಿದು ಬಂದಿದೆ.

ನೂತನ ಕಾರ್ಯಕಾರಿ ಅಧ್ಯಕ್ಷರಾಗಿ ಸಂಗತ್ ಸಿಂಗ್ ಗಿಲ್ಜಿಯಾನ್, ಸುಖ್ವಿಂದರ್ ಸಿಂಗ್ ಡ್ಯಾನಿ, ಪವನ್ ಗೋಯೆಲ್ ಮತ್ತು ಕುಲ್ಜಿತ್ ಸಿಂಗ್ ನಾಗ್ರಾರನ್ನು ಆಯ್ಕೆ ಮಾಡಲಾಗಿದೆ.

"ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ತಕ್ಷಣದಿಂದ ನೇಮಕ ಮಾಡಿದ್ದಾರೆ" ಎಂದು ಪಕ್ಷದ ಹೇಳಿಕೆಯೊಂದರಲ್ಲಿ ತಿಳಿಸಲಾಗಿದೆ.

"ಪಿಸಿಸಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಸುನಿಲ್ ಜಖರ್ ಅವರ ಕೊಡುಗೆಗಳನ್ನು ಪಕ್ಷವು ಪ್ರಶಂಸಿಸುತ್ತದೆ" ಎಂದು ಹೇಳಿಕೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)