ಯುಜಿಸಿಇಟಿ-2021: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
ಬೆಂಗಳೂರು, ಜು.19: ಯುಜಿಸಿಇಟಿ-2021ರ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಜು.20ರ ಸಂಜೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ http://kea.kar.nic.in ಗೆ ಭೇಟಿ ನೀಡಲು ಸೂಚಿಸಿದೆ.
ಮಾಹಿತಿ ತಿದ್ದುಪಡಿ: ಯುಜಿಸಿಇಟಿ 2021ರ ಅರ್ಜಿಯನ್ನು ಸಲ್ಲಿಸುವಾಗ ವಿದ್ಯಾರ್ಥಿಗಳು ತಪ್ಪು ಮಾಹಿತಿಯನ್ನು ನಮೂದಿಸಿದ್ದರೆ, ಅಂತಹ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಯಲ್ಲಿ ತಮ್ಮ ಮಾಹಿತಿಯನ್ನು ತಿದ್ದುಪಡಿ ಮಾಡಲು ಜು.20ರ ಸಂಜೆ 6.30 ರಿಂದ 23ರ ಸಂಜೆ 6ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
Next Story