varthabharthi


ರಾಷ್ಟ್ರೀಯ

ಅಶ್ಲೀಲ ಚಲನಚಿತ್ರಗಳ ಪ್ರಕರಣ: ನಟಿ ಶಿಲ್ಪಾ ಶೆಟ್ಟಿಯ ಪತಿ ರಾಜ್ ಕುಂದ್ರಾ ಬಂಧನ

ವಾರ್ತಾ ಭಾರತಿ : 19 Jul, 2021

photo: twitter

ಹೊಸದಿಲ್ಲಿ: ಅಶ್ಲೀಲ ಚಲನ ಚಿತ್ರಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ನಟಿ  ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಕುಂದ್ರಾ ಅವರು ಪ್ರಕರಣದಲ್ಲಿ ಪ್ರಮುಖ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಕಂಡುಬಂದ ಬಳಿಕ ಅವರನ್ನು ಇಂದು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆಂದು NDTV ವರದಿ ಮಾಡಿದೆ.

ಕುಂದ್ರಾ  ವಿರುದ್ಧ ನಮ್ಮ ಬಳಿ ಸಾಕಷ್ಟು ಸಾಕ್ಷ್ಯಗಳಿವೆ. ಹೆಚ್ಚಿನ ತನಿಖೆಗಳು ಪ್ರಗತಿಯಲ್ಲಿವೆ ಎಂದು ಪೊಲೀಸರು ಹೇಳಿದ್ದಾರೆ.

"ಅಶ್ಲೀಲ ಚಲನಚಿತ್ರಗಳ  ತಯಾರಿಸಿ, ಹಾಗೂ  ಅವುಗಳನ್ನು ಕೆಲವು ಅಪ್ಲಿಕೇಶನ್‌ಗಳ ಮೂಲಕ ಬಿತ್ತರಿಸಿದ ಬಗ್ಗೆ ಫೆಬ್ರವರಿ 2021 ರಲ್ಲಿ ಮುಂಬೈ ಅಪರಾಧ ಶಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರನ್ನು ಇಂದು ಜುಲೈ 19 ರಂದು ಬಂಧಿಸಿದ್ದೇವೆ. ಕುಂದ್ರಾ ಪ್ರಮುಖ ಆರೋಪಿ. ಈ ಬಗ್ಗೆ ನಮಗೆ ಸಾಕಷ್ಟು ಪುರಾವೆಗಳಿವೆ ”ಎಂದು ಮುಂಬೈ ಪೊಲೀಸ್ ಆಯುಕ್ತರು ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಆರೋಪವನ್ನು ನಿರಾಕರಿಸಿದ ಕುಂದ್ರಾ ಅವರು ನಿರೀಕ್ಷಣಾ ಜಾಮೀನು ಕೋರಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)