varthabharthi


ಕರ್ನಾಟಕ

ಕಲಬುರಗಿ: ಕಾರಿಗೆ ಟ್ಯಾಂಕರ್ ಢಿಕ್ಕಿ; ನಾಲ್ವರು ಯುವಕರು ಮೃತ್ಯು

ವಾರ್ತಾ ಭಾರತಿ : 20 Jul, 2021

ಕಲುಬುರಗಿ, ಜು.20: ಕಾರಿಗೆ ಟ್ಯಾಂಕರ್ ವೊಂದು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ನಗರ ಹೊರವಲಯದ ಕೋಟನೂರ ಬಳಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ಕಲಬುರಗಿ ನಿವಾಸಿಗಳಾದ ಉಲ್ಲಾಸ್ (28), ರಾಹುಲ್ (24), ಕಾಶಿ (26) ಹಾಗೂ ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಇವರೆಲ್ಲರೂ ಕಾರು ಪ್ರಯಾಣಿಕರಾಗಿದ್ದರು. ಈ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಗುರುತು ಪತ್ತೆಯಾಗದ ಓರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಈ ನಾಲ್ವರು ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಜೇವರ್ಗಿ ರಸ್ತೆಯಾಗಿ ಕಲಬುರಗಿಗೆ ಕಾರಿನಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಟ್ಯಾಂಕರ್​ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ನಗರ ಸಂಚಾರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)