ಕರಾವಳಿ
ಸಸಿಹಿತ್ಲು: 3 ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕಡಲತೀರದಲ್ಲಿ ಪತ್ತೆ

ಸಾಂದರ್ಭಿಕ ಚಿತ್ರ
ಮಂಗಳೂರು, ಜು.20: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹವು ಸಸಿಹಿತ್ಲು ಮುಂಡ ಕಡಲತೀರದಲ್ಲಿ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ.
ಮೃತದೇಹವು ಮುಕ್ಕ ನಿವಾಸಿ ಕಿರಣ್ ಶೆಟ್ಟಿ ಅವರದ್ದು ಎಂದು ತಿಳಿದುಬಂದಿದೆ.
ಮುಖಚರ್ಯೆಯು ಕಿರಣ್ ಶೆಟ್ಟಿ ಅವರನ್ನೇ ಹೋಲುವಂತಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಕಿರಣ್ ಅವರ ಕುಟುಂಬದವರು ತೆರಳಿದ್ದು, ಗುರುತು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಿರಣ್ ಶೆಟ್ಟಿ ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಿರಣ್ ಶೆಟ್ಟಿ ಪಾಲುದಾರಿಕೆಯಲ್ಲಿ ಅಂಗಡಿ ನಡೆಸುತ್ತಿದ್ದರು. ಕೊರೋನದಿಂದಾಗಿ ವ್ಯಾಪಾರ ಇಲ್ಲದೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರು ಎಂದು ಕುಟುಂಬಸ್ಥರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ










