ಬೆಂಗಳೂರು
ಯಡಿಯೂರಪ್ಪರನ್ನು ರಾಜಕೀಯವಾಗಿ ತುಳಿಯುವ ಪ್ರಯತ್ನದಿಂದ ಬಿಜೆಪಿಗೆ ಸಂಕಷ್ಟ: ಮುರುಘಾ ಶರಣರು ಎಚ್ಚರಿಕೆ

ಬೆಂಗಳೂರು, ಜು.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾನು ಕಂಡ ಅತ್ಯಂತ ಶ್ರೇಷ್ಠ ಹಾಗೂ ಮುತ್ಸದ್ದಿ ರಾಜಕಾರಣಿ. ಇಂತಹ ನಾಯಕರನ್ನು ರಾಜಕೀಯವಾಗಿ ತುಳಿಯುವ ಪ್ರಯತ್ನವಾಗುತ್ತಿದೆ. ಬಿಜೆಪಿ ಹೈಕಮಾಂಡ್ ಇದಕ್ಕೆ ಅವಕಾಶ ನೀಡಿದರೆ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪರನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಬಾರದು. ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದ ಅವರನ್ನು ಪಕ್ಷ ಗೌರವವಾಗಿ ನಡೆಸಿಕೊಳ್ಳಬೇಕು. ಕೆಳಮಟ್ಟದಿಂದ ಪಕ್ಷ ಸಂಘಟನೆ ಮಾಡಿ ಅಧಿಕಾರಕ್ಕೆ ಬರುವಂತೆ ಮಾಡುವಲ್ಲಿ ಯಡಿಯೂರಪ್ಪ ಶ್ರಮ ಅಪಾರ. ಅವರು ಕೇವಲ ವೀರಶೈವ ಸಮಾಜಕ್ಕೆ ಸೀಮಿತವಲ್ಲ. ಅವರೊಬ್ಬ ಮಾಸ್ ಲೀಡರ್. ಕಳೆದ ಎರಡು ವರ್ಷದಿಂದ ಕೊರೋನ ಸಂಕಷ್ಟದಲ್ಲಿ ಅದ್ಬುತವಾಗಿ ಕೆಲಸ ನಿರ್ವಹಿಸುವ ಮೂಲಕ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿರುವ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಅನಗತ್ಯ. ಈ ಬಗ್ಗೆ ಬಿಜೆಪಿ ವರಿಷ್ಠರು ಎಚ್ಚರಿಕೆ ವಹಿಸಬೇಕು ಸೂಚಿಸಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ










