ರಾಷ್ಟ್ರೀಯ
ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್
ವಾರ್ತಾ ಭಾರತಿ : 20 Jul, 2021

ಚೆನ್ನೈ: ಬಿಜೆಪಿ ನಾಯಕಿ ಹಾಗೂ ನಟಿ ಖುಷ್ಬೂ ಸುಂದರ್ ಅವರ ಅಧಿಕೃತ ಟ್ವಿಟರ್ ಖಾತೆಯನ್ನು ಸೋಮವಾರ ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ.
ಖುಷ್ಬೂ ಅವರ ಟ್ವಿಟರ್ ಖಾತೆ ಹ್ಯಾಕ್ ಆಗಿರುವುದು ಇದು ಎರಡನೇ ಬಾರಿ. 2020ರ ಎಪ್ರಿಲ್ ನಲ್ಲಿ ಖುಷ್ಬೂ ಅವರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿತ್ತು.
ಈ ಕುರಿತು ಖುಷ್ಬೂ ದೂರು ದಾಖಲಿಸಿದ್ದಾರೆ. ಮುಂದಿನ 48 ಗಂಟೆಗಳಲ್ಲಿ ಖುಷ್ಬೂ ಅವರ ಟ್ವಿಟರ್ ಖಾತೆಯನ್ನು ಮರು ಸ್ಥಾಪಿಸಲಾಗುವುದು ಎಂದು ಟ್ವಿಟರ್ ಸಂಸ್ಥೆ ತಿಳಿಸಿದೆ ಎಂದು ಖುಷ್ಬೂ ಮಾಹಿತಿ ನೀಡಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)










