varthabharthi


ಕರಾವಳಿ

ಉಡುಪಿ: ಕೋವಿಡ್ ಗೆ ಓರ್ವ ಬಲಿ, 104 ಮಂದಿಗೆ ಕೊರೋನ ಪಾಸಿಟಿವ್

ವಾರ್ತಾ ಭಾರತಿ : 21 Jul, 2021

ಉಡುಪಿ, ಜು.21: ಜಿಲ್ಲೆಯಲ್ಲಿ ಇಂದು ಕೊರೋನಕ್ಕೆ 104 ಮಂದಿ ಪಾಸಿಟಿವ್ ಬಂದಿದ್ದು, ಕುಂದಾಪುರದ ಒಬ್ಬರು ಸೊಂಕಿಗೆ ಬಲಿಯಾಗಿದ್ದಾರೆ. ದಿನದಲ್ಲಿ 44 ಮಂದಿ ಗುಣಮುಖರಾಗಿದ್ದು, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 846ಕ್ಕೆ ಏರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು ಕೋವಿಡ್-19 ಸೋಂಕಿನಿಂದ ಕುಂದಾಪುರ ತಾಲೂಕಿನ 53ರ ಹರೆಯದ ಪುರುಷರೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದರಿಂದ ಈವರೆಗೆ ಸಾಂಕ್ರಾಮಿಕಕ್ಕೆ ಬಲಿಯಾದವರ ಸಂಖ್ಯೆ 408ಕ್ಕೇರಿದೆ. ಗಂಭೀರ ಕೋವಿಡ್‌ನ ಲಕ್ಷಣ, ಉಸಿರಾಟದ ತೊಂದರೆ ಹಾಗೂ ನ್ಯೂಮೋನಿಯ ದೊಂದಿಗೆ ಕಿಡ್ನಿ ಸಮಸ್ಯೆಗಾಗಿ ಜು.5ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಮಂಗಳವಾರ ಮೃತಪಟ್ಟಿದ್ದಾರೆ.

ದಿನದಲ್ಲಿ ಕೊರೋನ ಪಾಸಿಟಿವ್ ದೃಢಪಟ್ಟ 104 ಮಂದಿಯಲ್ಲಿ 42 ಮಂದಿ ಪುರುಷರು ಹಾಗೂ 62 ಮಂದಿ ಮಹಿಳೆಯರು. ಉಡುಪಿ ತಾಲೂಕಿನ 57, ಕುಂದಾಪುರ ತಾಲೂಕಿನ 11, ಕಾರ್ಕಳ ತಾಲೂಕಿನ 34 ಹಾಗೂ ಇಬ್ಬರು ಹೊರಜಿಲ್ಲೆಯವರು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇವರಲ್ಲಿ 15 ಮಂದಿ ಕೋವಿಡ್‌ ಆಸ್ಪತ್ರೆ ಹಾಗೂ ಉಳಿದ 89 ಮಂದಿ ಮನೆಯಲ್ಲೇ ಚಿಕಿತ್ಸೆಯಲ್ಲಿದ್ದಾರೆ.

ಮಂಗಳವಾರ 44 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 67,307ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 4999 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆ ಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 68,561ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 7,46,725 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಜಿಲ್ಲೆಯಲ್ಲಿ ಸದ್ಯ 11 ಮಂದಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ.

2,808 ಮಂದಿಗೆ ಕೋವಿಡ್ ಲಸಿಕೆ

ಉಡುಪಿ ಜಿಲ್ಲೆಯಲ್ಲಿ ಇಂದು 2,808 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ 1,807 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿ ದರೆ, 1,001 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು 18ರಿಂದ 44 ವರ್ಷದೊಳಗಿನ 1,097 ಮಂದಿ ಮೊದಲ ಡೋಸ್ ಹಾಗೂ 88 ಮಂದಿ ಎರಡನೇ ಡೋಸನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 707 ಮಂದಿ ಮೊದಲ ಡೋಸ್ ಹಾಗೂ 907 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. ಆರು ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 3 ಮಂದಿ ಮುಂಚೂಣಿ ಕಾರ್ಯಕರ್ತರಿಗೂ ಇಂದು ಲಸಿಕೆ ನೀಡಲಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ 4,88,667 ಮಂದಿ ಲಸಿಕೆಯ ಮೊದಲ ಡೋಸ್ ಪಡೆದರೆ, 1,64,358 ಮಂದಿ ಎರಡನೇ ಡೋಸ್‌ನ್ನು ಪಡೆದು ಕೊಂಡಿದ್ದಾರೆ ಎಂದು ಡಾ.ಉಡುಪ ತಿಳಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)