varthabharthi


ಕರಾವಳಿ

ಉಡುಪಿ: ಬ್ಲ್ಯಾಕ್ ಫಂಗಸ್‌ಗೆ ಇಬ್ಬರು ಬಲಿ

ವಾರ್ತಾ ಭಾರತಿ : 23 Jul, 2021

ಉಡುಪಿ, ಜು.23: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕೊರೋನ ನಂತರದ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆಯಲ್ಲಿದ್ದ ಇಬ್ಬರು ರೋಗಿಗಳು ಇಂದು ಮೃತಪಟ್ಟಿದ್ದಾರೆ.

ಚಿತ್ರದುರ್ಗ ಜಿಲ್ಲೆಯ 45ವರ್ಷ ಪ್ರಾಯದ ಪುರುಷ ಹಾಗೂ ಹಾವೇರಿ ಜಿಲ್ಲೆಯ 43 ವರ್ಷ ಪ್ರಾಯದ ಮಹಿಳೆ ಮೃತಪಟ್ಟವ ರಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈ ಬ್ಲ್ಯಾಕ್ ಫಂಗಸ್‌ಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೇರಿದೆ. ಮೊದಲಿನ ಇಬ್ಬರೂ ಉಡುಪಿ ಜಿಲ್ಲೆಯವರಾಗಿದ್ದಾರೆ.

ಜಿಲ್ಲೆಯಲ್ಲೀಗ ಒಟ್ಟು ಎಂಟು ಮಂದಿ ಕಪ್ಪು ಶಿಲೀಂದ್ರ ಸೋಂಕಿಗೆ ಚಿಕಿತ್ಸೆಯಲ್ಲಿ ದ್ದಾರೆ. ಇವರಲ್ಲಿ ಆರು ಮಂದಿ ಕೆಎಂಸಿ ಮಣಿಪಾಲ ದಲ್ಲಿ ಹಾಗೂ ಇಬ್ಬರು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಇವರಲ್ಲಿ ಬೈಂದೂರು ತಾಲೂಕು ಮಯ್ಯಾಡಿಯ 55 ವರ್ಷ ಪ್ರಾಯದ ಮಹಿಳೆಯೊಬ್ಬರು ಮಾತ್ರ ಉಡುಪಿ ಜಿಲ್ಲೆಯವರಾಗಿದ್ದು, ಉಳಿದ ಆರು ಮಂದಿ ಹೊರ ಜಿಲ್ಲೆಯವರು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)