varthabharthi


ಅಂತಾರಾಷ್ಟ್ರೀಯ

ಕಾಂಗೊ: ಗುಂಡಿನ ದಾಳಿಯಲ್ಲಿ 16 ನಾಗರಿಕರ ಮೃತ್ಯು

ವಾರ್ತಾ ಭಾರತಿ : 23 Jul, 2021

ಕಿನ್ಶಸ, ಜು.23: ಡೆಮೊಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೊ(ಡಿಆರ್ಸಿ)ಯಲ್ಲಿ ದುಷ್ಕರ್ಮಿಗಳು ನಡೆಸಿದ ಹೊಂಚುದಾಳಿಯಲ್ಲಿ ಕನಿಷ್ಟ 16 ನಾಗರಿಕರು ಮೃತಪಟ್ಟಿರುವುದಾಗಿ ಸ್ಥಳೀಯ ಮೂಲಗಳು ಹೇಳಿವೆ.

ವಾರದ ಸಂತೆಯಿಂದ ಹಿಂದಿರುಗುತ್ತಿದ್ದ ಜನರ ಗುಂಪಿನ ಮೇಲೆ ದುಷ್ಕರ್ಮಿಗಳು ಅಡಗಿ ಕುಳಿತು ಗುಂಡಿನ ದಾಳಿ ನಡೆಸಿದ್ದಾರೆ. ಉತ್ತರ ಕಿವು ಪ್ರಾಂತ್ಯದ ಬೆನಿ ನಗರದಿಂದ ಸುಮಾರು 40 ಕಿ.ಮೀ ದೂರದ, ಮೈಮೋಯಾ-ಚಾನಿ ಚಾನಿ ಹೆದ್ದಾರಿಯಲ್ಲಿ ಈ ದುರಂತ ನಡೆದಿದೆ. ಮೃತರಲ್ಲಿ 6 ಮಹಿಳೆಯರು ಹಾಗೂ ಒಂದು ಮಗು ಸೇರಿದೆ ಎಂದು ಸ್ಥಳೀಯ ಆಸ್ಪತ್ರೆಯ ಮುಖ್ಯಸ್ಥರು ಹೇಳಿದ್ದಾರೆ. ಆಸ್ಪತ್ರೆಯ ಶವಾಗಾರದಲ್ಲಿ 16 ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇತರ 9 ಮಂದಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಲಾಗುತ್ತಿದೆ ಎಂದವರು ಹೇಳಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)