varthabharthi


ಕರಾವಳಿ

ಕಾಂಗ್ರೆಸ್ ದಲಿತರಿಗೆ ಏನು ಮಾಡಿದೆ ಎಂದು ತಿಳಿಸಲಿ : ನಳಿನ್ ಕುಮಾರ್ ಕಟೀಲ್

ವಾರ್ತಾ ಭಾರತಿ : 25 Jul, 2021

ಉಡುಪಿ : ಕಾಂಗ್ರೆಸ್ ದಲಿತರಿಗೆ ಏನು ಮಾಡಿದೆ ಎಂಬ ಬಗ್ಗೆ ತಿಳಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.

ಉಡುಪಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು ರಾಜ್ಯ ಪ್ರವಾಹ ಪರಿಸ್ಥಿತಿ, ಸಿಎಂ ಬದಲಾವಣೆ ವಿಚಾರ ನಡೆಯುತ್ತಿದೆ. ಎಲ್ಲಾ ಸಚಿವರು ತಮ್ಮ ಕ್ಷೇತ್ರದಲ್ಲಿ ಇರುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಎಲ್ಲರೂ ಆಯಾಯ ಜಿಲ್ಲೆಯಲ್ಲಿದ್ದು ನೆರೆ ಪರಿಹಾರದ ಕೆಲಸ ಮಾಡುತ್ತಿದ್ದಾರೆ. ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದಾರೆ ಮತ್ತು ಅವರು ರಾಜ್ಯಾದ್ಯಂತ ಪ್ರವಾಸ ಮಾಡಿ ಸಾಂತ್ವನ ಹೇಳುತ್ತಿದ್ದಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಹಿಂದೆ ಅಹಿಂದಾ ಹೋರಾಟ ಮಾಡಿದವರು. ಅಹಿಂದಾ ಹೋರಾಟ ಮಾಡಿ ಮುಖ್ಯಮಂತ್ರಿಯಾದರು. ಸಿಎಂ ಆದ ಮೇಲೆ ಅಹಿಂದ ಮರೆತರು. ಮುಖ್ಯಮಂತ್ರಿಯಾದ ಮೇಲೆ ಅವರು ಹಿಂದುಳಿದ ವರ್ಗಕ್ಕೆ ಏನೂ ಮಾಡಿಲ್ಲ. ದಲಿತ ಮುಖ್ಯಮಂತ್ರಿ ಎಂಬ ಚರ್ಚೆಯನ್ನೇ ಮುಚ್ಚಿ ಹಾಕಿದರು. ಕಾಂಗ್ರೆಸ್ ನಲ್ಲಿ ರಾತ್ರಿ-ಹಗಲು ಕೆಲಸ ಮಾಡಿದ ಜಿ. ಪರಮೇಶ್ವರ್ ರನ್ನು ಮೂಲೆಗುಂಪು ಮಾಡಿದರು. ಪರಮೇಶ್ವರ ಮತ್ತು ಖರ್ಗೆಯನ್ನು ಸೋಲಿಸಿದ ಇತಿಹಾಸ ಇದೆ. ತಾಕತ್ ಇದ್ದರೆ ದಲಿತ ಸಿಎಂ ಗೆ ಮಾಡಿ ಎನ್ನುವುದು ಎಷ್ಟು ಸರಿ ? ಎಂದು ಪ್ರಶ್ನಿಸಿದರು.

ವಾಜಪೇಯಿ ಸರ್ಕಾರ ಮುಸ್ಲಿಂ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದೆ. ನರೇಂದ್ರ ಮೋದಿ ದಲಿತ ರಾಷ್ಟ್ರಪತಿಯನ್ನು ದೇಶಕ್ಕೆ ಕೊಟ್ಟಿದ್ದಾರೆ. ಯಡಿಯೂರಪ್ಪ ಗೋವಿಂದ ಕಾರಜೋಳ ರನ್ನು ಉಪಮುಖ್ಯಮಂತ್ರಿಯಾಗಿ ಮಾಡಿದ್ದಾರೆ. ಕೇಂದ್ರದಲ್ಲಿ ನಾರಾಯಣಸ್ವಾಮಿ ಸಚಿವರಾಗಿದ್ದಾರೆ. ಕೇಂದ್ರ ಮಂತ್ರಿಮಂಡಲದಲ್ಲಿ ಶೇಕಡ 30 ಎಸ್ ಸಿ ಎಸ್ ಟಿ ಮಂತ್ರಿಗಳು ಇದ್ದಾರೆ. ಕಾಂಗ್ರೆಸ್ ದಲಿತರಿಗೆ ಏನು ಮಾಡಿದೆ ಎಂದು ತಿಳಿಸಲಿ ಎಂದರು.

ಸಿಎಂ ಬದಲಾವಣೆ ಬಗ್ಗೆ ಇಂದು ಹೈಕಮಾಂಡ್ ಸಂದೇಶ ವಿಚಾರ

ನಾನು ಬಿಜೆಪಿಯ ರಾಜ್ಯಾಧ್ಯಕ್ಷ, ಇವತ್ತಿನವರೆಗೆ ನನಗೆ ಯಾವುದೇ ಮಾಹಿತಿ ಬಂದಿಲ್ಲ. ನಾನು ಕೇವಲ ಮಾಧ್ಯಮಗಳಿಂದ ಈ ವಿಚಾರ ತಿಳಿದುಕೊಂಡಿದ್ದೇನೆ. ಈ ಬಗ್ಗೆ ನನಗೆ ಹೇಳಲು ಏನೂ ಇಲ್ಲ. ರಾಜ್ಯದ ಟ್ರ್ಯಾಕ್ಟರ್ ಈಗ ಯಡಿಯೂರಪ್ಪ ಬಿಡುತ್ತಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)