ಪ್ಯಾರಾಲಿಂಪಿಕ್ಸ್ ಸಮಾರೋಪ ಸಮಾರಂಭದಲ್ಲಿ ಭಾರತದ ಧ್ವಜಧಾರಿಯಾಗಿ ಶೂಟರ್ ಅವನಿ ಲೇಖರ
photo: Twitter
ಟೋಕಿಯೊ: ರವಿವಾರ ನಡೆಯುವ ಟೋಕಿಯೊ ಪ್ಯಾರಾಲಿಂಪಿಕ್ಸ್ನ ಸಮಾರೋಪ ಸಮಾರಂಭದ ಪಥ ಸಂಚಲನದಲ್ಲಿ ಭಾರತದ ಶೂಟರ್ ಅವನಿ ಲೇಖರ ದೇಶದ ಧ್ವಜವನ್ನು ಹಿಡಿದು ತಂಡವನ್ನು ಮುನ್ನಡೆಸಲಿದ್ದಾರೆ.
19 ವರ್ಷದ ಲೇಖರ ಸೋಮವಾರ 50 ಮೀಟರ್ ರೈಫಲ್ 3 ಪೊಸಿಶನ್ ಎಸ್ಎಚ್ 1 ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೊದಲು ಸೋಮವಾರ ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್ಎಚ್ 1 ಸ್ಪರ್ಧೆಯಲ್ಲಿ ಚಿನ್ನ ಗೆದ್ದಿದ್ದರು. ಒಂದೇ ಆವೃತ್ತಿಯ ಪ್ಯಾರಾಲಿಂಪಿಕ್ಸ್ ನಲ್ಲಿ 2 ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎನಿಸಿಕೊಂಡಿದ್ದರು.
"ಅವನಿ ಧ್ವಜಧಾರಿಯಾಗಲಿದ್ದು, ಸಮಾರೋಪ ಸಮಾರಂಭದಲ್ಲಿ ಭಾರತೀಯ ತಂಡದಿಂದ 11 ಮಂದಿ ಭಾಗವಹಿಸಲಿದ್ದಾರೆ" ಎಂದು ಭಾರತೀಯ ಪ್ಯಾರಾಲಿಂಪಿಕ್ಸ್ ಸಮಿತಿಯ (ಪಿಸಿಐ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story