ಬೆಂಗಳೂರು: ಮಗು ಮೇಲೆ ಬೀದಿ ನಾಯಿಗಳ ದಾಳಿ; ಠಾಣೆಯಲ್ಲಿ ದೂರು ದಾಖಲು
ಬೆಂಗಳೂರು, ಸೆ.4: ಎಚ್ಎಎಲ್ ಬಳಿಯ ನಾರಾಯಣರೆಡ್ಡಿ ಲೇಔಟ್ನ ಮನೆಯೊಂದರ ಮುಂದೆ ಆಟ ಆಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಮಗುವನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಶನಿವಾರ ನಡೆದಿದೆ.
ಎರಡು ವರ್ಷದ ಹೆಣ್ಣು ಮಗುವನ್ನು ನಾಯಿಗಳು ಕಚ್ಚಿ ಎಳೆದಾಡಿದ್ದು, ಗಾಯಗೊಂಡಿರುವ ಮಗು ಸಾವು ಬದುಕಿನ ನಡುವೆ ಹೋರಾಡುತ್ತಿದೆ. ನಾಯಿಗಳು ಮಗುವಿನ ಕುತ್ತಿಗೆ, ತೊಡೆ, ಕಿವಿ ಭಾಗಕ್ಕೆ ಕಚ್ಚಿವೆ. ಗಾಯಗೊಂಡಿರುವ ಮಗು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.
ಬೀದಿ ನಾಯಿಗಳ ಹಾವಳಿ ತಡೆಯುವಂತೆ ಈ ಹಿಂದೆ ಹಲವು ಬಾರಿ ಬಿಬಿಎಂಪಿಗೆ ದೂರು ನೀಡಲಾಗಿತ್ತು. ಸದ್ಯ ಮಗುವಿನ ಪೋಷಕರು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯ ಎಂದು ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Next Story