ಕರ್ನಾಟಕ
ಗುಂಡ್ಲುಪೇಟೆ: ಗ್ಯಾಸ್ ಸಿಲಿಂಡರ್ ಸ್ಫೋಟ; ಮನೆ ಬೆಂಕಿಗಾಹುತಿ

ಚಾಮರಾಜನಗರ, ಸೆ.9: ಅಡುಗೆ ಅನಿಲ ಸಿಲಿಂಡರ್ ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ ಮನೆಯೊಂದು ಬೆಂಕಿಗಾಹುತಿಯಾದ ಘಟನೆ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗ್ರಾಮದಲ್ಲಿ ನಡೆದಿದೆ.
ಹಿರಿಕಾಟಿ ಗ್ರಾಮ ನಿವಾಸಿ ಲಕ್ಷ್ಮಮ್ಮ ಎಂಬವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಲಕ್ಷ್ಮಮ್ಮ ಅಂಗಡಿಗೆಂದು ಮೊಮ್ಮಗಳೊಂದಿಗೆ ಮನೆಯಿಂದ ತೆರಳಿದ್ದ ಈ ವೇಳೆ ಸ್ಫೋಟ ಸಂಭವಿಸಿದ್ದರಿಂದ ಭಾರೀ ದುರಂತ ತಪ್ಪಿದೆ. ಈ ಸಂದರ್ಭದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಮನೆಗೆ ವ್ಯಾಪಿಸಿ ಹೊತ್ತಿ ಉರಿಯಿತು.
ವಿಷಯ ತಿಳಿದು ಕೂಡಲೇ ಗುಂಡ್ಲುಪೇಟೆಯಿಂದ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು.
ಈ ಬಗ್ಗೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ಬೇಗೂರು ಹೋಬಳಿಯ ರಾಜಸ್ವ ನಿರೀಕ್ಷಕರು ರವಿ ಮತ್ತು ಗ್ರಾಮಲೆಕ್ಕಿಗ ಸಿ.ಮಹದೇವಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ












