varthabharthi


ಬೆಂಗಳೂರು

ಐಎಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರಕಾರದ ಆದೇಶ

ವಾರ್ತಾ ಭಾರತಿ : 14 Sep, 2021

ಬೆಂಗಳೂರು, ಸೆ.14: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಟಿ.ಕೆ.ಅವರನ್ನು ವರ್ಗಾವಣೆ ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.

ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಡಾ.ಸೆಲ್ವಕುಮಾರ್ ಎಸ್. ಅವರಿಗೆ ಸಹಕಾರ ಇಲಾಖೆಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ. ಅಬಕಾರಿ ಇಲಾಖೆಯ ಆಯುಕ್ತ ಡಾ.ರವಿಶಂಕರ್ ಜೆ. ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ವೈದ್ಯಕೀಯ ಶಿಕ್ಷಣ)ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಸಾರ್ವಜನಿಕ ಸೂಚನೆ ಇಲಾಖೆಯ ಆಯುಕ್ತ-ಡಾ.ವಿಶಾಲ್ ಆರ್., ಅವರನ್ನು ಬಿಎಂಟಿಸಿಯ ವ್ಯವಸ್ಥಾಪಕ ನಿರ್ದೇಶಕ- ಅನ್ವುಕುಮಾರ್ ವಿ. ಹಾಗೂ ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಡಾ.ರೇಜು ಎಂ.ಟಿ. ಅವರನ್ನು ವರ್ಗಾವಣೆ ಮಾಡಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ(ಕಂದಾಯ)-ಡಾ.ರಾಮ್ ಪ್ರಸಾದ್ ಮನೋಹರ್,  ನೋಂದಣಿ ಮತ್ತು ಮುಂದ್ರಾಕ ಇಲಾಖೆಯ ಮಹಾನಿರೀಕ್ಷಕ ಹಾಗೂ ಆಯುಕ್ತ-ರವೀಂದ್ರ ಪಿ.ಎನ್. ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)