ಮಹಿಳೆಯ ಅತ್ಯಾಚಾರ: ಎಲ್ ಜೆಪಿ ಸಂಸದ ಪ್ರಿನ್ಸ್ ಪಾಸ್ವಾನ್ ವಿರುದ್ಧ ಎಫ್ಐಆರ್
photo: facebook
ಹೊಸದಿಲ್ಲಿ, ಸೆ. 14: ಮಹಿಳೆಯೋರ್ವರನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಲೋಕಜನಶಕ್ತಿ ಪಕ್ಷದ ಸಂಸದ ಪ್ರಿನ್ಸ್ ಪಾಸ್ವಾನ್ ವಿರುದ್ಧ ದಿಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪ್ರಿನ್ಸ್ ಪಾಸ್ವಾನ್ ಲೋಕ ಜನಶಕ್ತಿ ಪಕ್ಷದ ರಾಷ್ಟ್ರಾಧ್ಯಕ್ಷ ಚಿರಾಗ್ ಪಾಸ್ವಾನ್ ಅವರ ಸೋದರ ಸಂಬಂಧಿ.
ಪ್ರಿನ್ಸ್ ಪಾಸ್ವಾನ್ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ ಮಹಿಳೆ ಎಲ್ ಜೆಪಿ ಕಾರ್ಯಕರ್ತೆ. ಈಕೆ, ‘‘ಪಿನ್ಸ್ ಪಾಸ್ವಾನ್ ವಿರುದ್ಧ ಪ್ರಕರಣ ದಾಖಲಿಸದಂತೆ ಚಿರಾಗ್ ಪಾಸ್ವಾನ್ ತನ್ನ ಮೇಲೆ ಒತ್ತಡ ಹೇರಿದ್ದಾರೆ’’ ಎಂದು ಆರೋಪಿಸಿದ್ದಾರೆ.
ಮಹಿಳೆ ಮೂರು ತಿಂಗಳ ಹಿಂದೆ ಪೊಲೀಸರನ್ನು ಸಂಪರ್ಕಿಸಿದ್ದರು. ಆದರೆ, ನ್ಯಾಯಾಲಯದ ಆದೇಶದ ಬಳಿಕ ಸೆಪ್ಟಂಬರ್ 9ರಂದು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
Next Story